ನ್ಯೂಸ್

ಸಿಎಂ ಜಾತಿ ಗಣತಿ ವರದಿ ಸ್ವೀಕಾರ; ವಿರೋಧ ವ್ಯಕ್ತಪಡಿಸಿದ ಡಾ.ಶಾಮನೂರು ಶಿವಶಂಕರಪ್ಪ

ಮೋಹನ್​ ಶೆಟ್ಟಿ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಜಾತಿ ಗಣತಿ ವರದಿ ಸ್ವೀಕರಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷದಿಂದ ಇದೀಗ ಮೊದಲ ವಿರೋಧ ವ್ಯಕ್ತವಾಗಿದೆ. ಹಿರಿಯ ಕಾಂಗ್ರೆಸ್ ನಾಯಕರಾದ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರೂ ಆದ ಡಾ.ಶಾಮನೂರು ಶಿವಶಂಕರಪ್ಪ ಜಾತಿಗಣತಿ ವಿರುದ್ಧ ಮತ್ತೆ ಗುಡುಗಿದ್ದಾರೆ.

ಜಾತಿ ಗಣತಿ ವರದಿ ಅವೈಜ್ನಾನಿಕವಾಗಿದೆ ಎಂಬ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಜಾತಿ ಗಣತಿ ವಿರೋಧಿಸಿ ವೀರಶೈವ ಮಹಾಸಭಾದಿಂದ ಈಗಾಗಲೇ ಎರಡು ಬಾರಿ ಮನವಿ ಸಲ್ಲಿಸಲಾಗಿದೆ. ಇನ್ನು ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ವೀರಶೈವ ಮಹಾಸಭಾ ಸಮ್ಮೇಳನದಲ್ಲಿ ಕೂಡ ಜಾತ ಗಣತಿ ವಿರೋಧಿಸಿ ನಿರ್ಣಯ ಅಂಗೀಕರಿಸಲಾಗಿದೆ ಎಂದರು.

ಮನೆ, ಮನೆಗೆ ಭೇಟಿ ನೀಡದೆ ಅವೈಜ್ಙಾನಿಕುವಾಗಿ ತಯಾರಿಸಲಾದ ವರದಿಯನ್ನು ಸಮಾಜ ಒಪ್ಪುವುದಿಲ್ಲ. ಈ ನಿಟ್ಟಿನಲ್ಲಿ ಹೋರಾಟ ಚಾಲ್ತಿ‌ಯಲ್ಲಿರಲಿದೆ ಎಂದು ಹೇಳಿದರು.