ನವದೆಹಲಿ: ವಿದೇಶಿ ದೇಣಿಗೆ, ಹಣ ದುರುಪಯೋಗ ಆರೋಪದಡಿ ತಬ್ಲಿ ಜಮಾತ್ ಮತ್ತು ಅದರ ಮುಖ್ಯಸ್ಥ ಮೌಲಾನಾ ಸಾದ್ ವಿರುದ್ಧ ಸಿಬಿಐ ಶುಕ್ರವಾರ ತನಿಖೆ ಆರಂಭಿಸಿದೆ.
ಮಧ್ಯಪ್ರಾಚ್ಯ ದೇಶಗಳು ಮತ್ತು ವಿದೇಶಿ ಪ್ರಜೆಗಳಿಂದ ಅಕ್ರಮವಾಗಿ ದೇಣಿಗೆ ಪಡೆಯಲಾಗಿದೆ ಎಂಬ ಆರೋಪ ಈ ಸಂಘಟನೆಯ ಮೇಲಿದೆ. ಪ್ರಕರಣಕ್ಕೆ ಸಂಬಂಧ ಪಟ್ಟ ದಾಖಲೆಗಳನ್ನು ದೆಹಲಿ ಪೊಲೀಸರು ಸಿಬಿಐಗೆ ಹಸ್ತಾಂತರಿಸಿದ್ದಾರೆ.
ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಸೂಕ್ತ ಸಾಕ್ಷಾೃಧಾರಗಳು ದೊರಕಿದ ನಂತರ ಸಿಬಿಐ ಪೊಲೀಸರು ಎ್ಐಆರ್ ದಾಖಲಿಸಲಿದ್ದಾರೆ. ಲಾಕ್‌ಡೌನ್ ಸಮಯದಲ್ಲಿ ನಿಯಮ ಉಲ್ಲಂಘನೆ ಮಾಡಿ ಕಾರ್ಯಕ್ರಮ ಆಯೋಜಿಸಿದ್ದ ಕುರಿತಾಗಿ ಮೌಲಾನಾ ಸಾದ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಪ್ರಕರಣದಡಿಯಲ್ಲಿ 35 ದೇಶಗಳ ಮತ್ತು 910 ವಿದೇಶಿ ಪ್ರಜೆಗಳ ವಿರುದ್ಧ ಚಾರ್ಜ್‌ಶೀಟ್ ಸಿದ್ಧಪಡಿಸಿದ್ದಾರೆ. ಜಾರಿ ನಿರ್ದೇಶನಾಲಯ ಮೌಲಾನಾ ಸಾದ್ ಮತ್ತು ಇತರೆ ಎಂಟು ಜನರ ವಿರುದ್ಧ ಹಣ ವರ್ಗಾವಣೆ ಪ್ರಕರಣವನ್ನೂ ದಾಖಲಿಸಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಬ್ಲಿ ಕೆಲ ಉದ್ಯೋಗಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.