ನ್ಯೂಸ್

ಜಿಲ್ಲೆಯ ನಗರ, ಪಟ್ಟಣಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಜಿಲ್ಲಾಧಿಕಾರಿ ಸೂಚನೆ

Haveri - Kariyappa Aralikatti

ಹಾವೇರಿ: ಜಿಲ್ಲೆಯ ನಗರ-ಪಟ್ಟಣಗಳ ಸೂಕ್ಷ್ಮ ಪ್ರದೇಶದಲ್ಲಿ ಸಿಸಿ ಕ್ಯಾಮರಾ ಅಳವಡಿಸುವಂತೆ ನಗರ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ಹಾಗೂ ತಹಶೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ರಸ್ತೆ ಸಂಚಾರ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನಾಗರಿಕರ ಸುರಕ್ಷತಾ ಕ್ರಮಗಳ ಮುನ್ನೆಚ್ಚರಿಕೆಯ ಕ್ರಮವಾಗಿ ನಗರ-ಪಟ್ಟಣಗಳಲ್ಲಿ ಪೊಲೀಸ್ ಸಮನ್ವಯದೊಂದಿಗೆ ಸರ್ವೇ ನಡೆಸಿ, ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ, ಸಿಸಿ ಕ್ಯಾಮರಾಗಳನ್ನು ಅಳವಡಿಸುವಂತೆ ಸೂಚನೆ ನೀಡಿದರು.
ಉಪ ವಿಭಾಗಾಧಿಕಾರಿಗಳು ತಮ್ಮ ವ್ಯಾಪ್ತಿಯ ನಗರ-ಪಟ್ಟಣ ಪ್ರದೇಶಗಳಲ್ಲಿ ಸ್ಥಳೀಯ ಅನುದಾನ ಬಳಸಿಕೊಂಡು ಸಿಸಿ ಕ್ಯಾಮರಾ ಅಳವಡಿಕೆಗೆ ತ್ವರಿತವಾಗಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.