ಬೆಂಗಳೂರು: ನಿಷೇಧಿತ ಇ-ಸಿಗರೇಟ್, ವಿದೇಶಿ ಸಿಗರೇಟ್ ಮಾರಾಟ ಅಂಗಡಿಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ 8.90 ಲಕ್ಷ ರೂ. ಮೌಲ್ಯದ ಸಿಗರೇಟ್‌ಗಳನ್ನು ಜಪ್ತಿ ಮಾಡಿದ್ದಾರೆ.
ಕೋರಮಂಗಲ, ಮೈಕೋ ಲೇಔಟ್, ಕಬ್ಬನ್ ಪಾರ್ಕ್, ಕೆ.ಎಸ್. ಲೇಔಟ್, ಪುಲಿಕೇಶಿನಗರ ಮತ್ತು ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ಸಿಸಿಬಿ ವಿಶೇಷ ತಂಡಗಳು ಕಾರ್ಯಾಚರಣೆ ನಡೆಸಿವೆ. 8.90 ಲಕ್ಷ ರೂ. ಮೌಲ್ಯದ 681 ಇ-ಸಿಗರೇಟ್ ಮತ್ತು 805 ಪ್ಯಾಕ್ ವಿದೇಶಿ ಸಿಗರೇಟ್ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಇ-ಸಿಗರೇಟ್ ಮತ್ತು ವಿದೇಶಿ ಸಿಗರೇಟ್‌ಗಳ ಮಾರಾಟವನ್ನು ನಿಷೇಧ ಮಾಡಿದೆ. ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುತ್ತಿದ್ದರು. ಆರೋಪಿಗಳ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.