ಮಧ್ಯಪ್ರದೇಶ: ಕಾಲೇಜು ಯುವಜನೋತ್ಸವ (College Event )ಸಂದರ್ಭದಲ್ಲಿ ಪುರುಷ ವಿದ್ಯಾರ್ಥಿಗಳು ಹುಡುಗಿಯರು ಬಟ್ಟೆ ಬದಲಾಯಿಸುವ ಕೋಣೆಯಲ್ಲಿ ಇಣುಕಿ ನೋಡಿ ರಹಸ್ಯವಾಗಿ ವಿಡಿಯೋ ರೆಕಾರ್ಡ್ ಮಾಡುತ್ತಿರುವ ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದ ಮಂದ್ಸೌರ್‌ನಲ್ಲಿ ನಡೆದಿದೆ.
ಈ ವೇಳೆ ಕೆಲವು ಹುಡುಗಿಯರು ನಮ್ಮನ್ನು ಯಾರೋ ಗಮನಿಸುತ್ತಿದ್ದಾರೆಂದು ತಿಳಿದ ತಕ್ಷಣ ಕಾಲೇಜಿನ ಪ್ರಾಂಶುಪಾಲರಾದ ಪ್ರೀತಿ ಪಂಚೋಲಿಗೆ ಮಾಹಿತಿ ನೀಡಿದ್ದಾರೆ. ಇನ್ನು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಪಂಚೋಲಿ ಕಾಲೇಜಿನ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸಿದ್ದು, ಇಲ್ಲಿ ವಿದ್ಯಾರ್ಥಿಗಳು ಅನುಚಿತವಾಗಿ ವರ್ತಿಸುತ್ತಿರುವುದನ್ನು ಗಮನಿಸಿದ್ದಾರೆ.
ಇದನ್ನೂ ಓದಿ: ಆಸೀಸ್ಗೆ ಮತ್ತೊಂದು ಶಾಕ್! ಭಾರತ ವಿರುದ್ಧ ಏಕದಿನ ಸರಣಿಗೆ ಮತ್ತೊಬ್ಬ ಆಟಗಾರ ಅಲಭ್ಯ | IND vs AUS ODI
ಇದಾದ ಬಳಿಕ ಪಾಂಶುಪಾಲರು ಅಲ್ಲಿನ ಭಾನಪುರ ಪೊಲೀಸರಿಗೆ ಲಿಖಿತ ದೂರು ನೀಡಿದ್ದು, ಪ್ರಕರಣದಲ್ಲಿ ಪಾಲ್ಗೊಂಡಿದ್ದ 3 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಒಬ್ಬ ವಿದ್ಯಾರ್ಥಿ ತಪ್ಪಿಸಿಕೊಂಡಿದ್ದಾನೆ. ಆತನ ಪತ್ತೆ ಮಾಡಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ತಿಳಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಕಾಂಗ್ರೆಸ್ ಘಟನೆಯನ್ನು ಖಂಡಿಸಿದ್ದು, ಮಧ್ಯಪ್ರದೇಶದ ಮಂದ್ಸೌರ್‌ನಲ್ಲಿ, ಬಿಜೆಪಿಯೊಂದಿಗೆ ಸಂಯೋಜಿತವಾಗಿರುವ ವಿದ್ಯಾರ್ಥಿ ಘಟಕವಾದ ಎಬಿವಿಪಿಯ ನಾಲ್ವರು ಪದಾಧಿಕಾರಿಗಳು ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುತ್ತಿದ್ದಾಗ ರಹಸ್ಯವಾಗಿ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ. ಅವರ ನಾಚಿಕೆಗೇಡಿನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ಇದು ನನ್ನ ಕೊನೆಯ ದೀಪಾವಳಿ, ಕೊನೆಗೂ ನಾನು ಸೋತೆ! ಕಣ್ಣೀರು ಹಾಕುತ್ತಾ ಪತ್ರ ಬರೆದ ಕ್ಯಾನ್ಸರ್ ರೋಗಿ.. cancer
ಈ ನಾಚಿಕೆಗೇಡಿನ ಘಟನೆ ಬಿಜೆಪಿಯ ನಿಜವಾದ ನಡವಳಿಕೆ ಮತ್ತು ಸ್ವರೂಪವನ್ನು ಬಹಿರಂಗಪಡಿಸುತ್ತದೆ. ಒಂದೆಡೆ, ಬಿಜೆಪಿ ಸರ್ಕಾರ ಮಹಿಳೆಯರ ಸುರಕ್ಷತೆ ಮತ್ತು ಗೌರವದ ಬಗ್ಗೆ ಮಾತನಾಡುತ್ತದೆ. ಮತ್ತೊಂದೆಡೆ ತನ್ನದೇ ಸದಸ್ಯರು ಮಹಿಳೆಯರ ಘನತೆಯನ್ನು ಉಲ್ಲಂಘಿಸುವ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಅವರು ನಾಚಿಕೆಪಡಬೇಕು ಎಂದು ಕಾಂಗ್ರೆಸ್ ಅಧೀಕೃತ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. (ಏಜೆನ್ಸೀಸ್)