ನ್ಯೂಸ್

61ನೇ ವಸಂತಕ್ಕೆ ಕಾಲಿಟ್ಟ ನಟ ಡಾ. ಶಿವರಾಜ್​ಕುಮಾರ್​; ಸಿಎಂ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

ಬೆಂಗಳೂರು: ಹ್ಯಾಟ್ರಿಕ್​ ಹೀರೋ, ಸೆಂಚುರಿ ಸ್ಟಾರ್​, ಕರುನಾಡ ಚಕ್ರವರ್ತಿ ಡಾ. ಶಿವರಾಜ್​ಕುಮಾರ್​ ಜುಲೈ 12ರಂದು 61ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ನೆಚ್ಚಿನ ನಟನ ಜನ್ಮದಿನದ ಅಂಗವಾಗಿ ಅಭಿಮಾನಿಗಳು, ರಾಜಕೀಯ ಗಣ್ಯರು, ಸಿನಿಮಾ ತಾರೆಯರು ಸೇರಿದಂತೆ ಅನೇಕರು ಶಿವಣ್ಣನ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ ಕನ್ನಡ ಚಿತ್ರರಂಗದ ಖ್ಯಾತ ಹಾಗೂ ಪ್ರತಿಭಾವಂತ ನಟ ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

ನಟನಾ ಕೌಶಲ್ಯದಿಂದ ಮಾತ್ರವಲ್ಲ ತಮ್ಮ ವಿನಯಶೀಲ ನಡೆ-ನುಡಿಗಳಿಂದಲೂ ಕೋಟ್ಯಂತರ ಜನರ ಪ್ರೀತಿ-ಅಭಿಮಾನಗಳಿಗೆ ಪಾತ್ರರಾಗಿರುವ ಶಿವರಾಜ್ ಕುಮಾರ್ ಅವರಿಗೆ ಆಯುಷ್ಯ ಮತ್ತು ಆರೋಗ್ಯದ ಭಾಗ್ಯ ಕೂಡಿ ಬರಲಿ ಎಂದು ಹಾರೈಸುತ್ತೇನೆ.

ಡಿಸಿಎಂ ಡಿ.ಕೆ. ಶಿವಕುಮಾರ್​ ಟ್ವೀಟ್​ ಮಾಡಿ ಕನ್ನಡದ ಖ್ಯಾತ ನಟ, ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಕನ್ನಡ ಚಿತ್ರರಂಗಕ್ಕೆ ನಿಮ್ಮ ಕೊಡುಗೆ ಅಪಾರ. ನಿಮ್ಮಿಂದ ಚಿತ್ರರಂಗ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಆಶಿಸುತ್ತಾ, ಭಗವಂತನ ಆಶೀರ್ವಾದ ಸದಾ ತಮ್ಮ ಮೇಲೆ ಇರಲಿ ಎಂದು ಶುಭ ಹಾರೈಸುತ್ತೇನೆ.

ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ ಜನುಮದಿನದ ಅಂಗವಾಗಿ ಘೋಸ್ಟ್​ ಚಿತ್ರದ ಟೀಸರ್​ ಬಿಡುಗಡೆಯಾಗಿದ್ದು, ನೆಚ್ಚಿನ ನಟನ ಜನುಮದಿನದ ಅಂಗವಾಗಿ ಅಭಿಮಾನಿಗಳಿಗೆ ರಸದೌತಣವನ್ನು ನೀಡಲಾಗಿದೆ.