ನ್ಯೂಸ್

ಜನಗಣತಿ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ: ಸುಪ್ರೀಂ ಕೋರ್ಟ್​ಗೆ ಅಫಿಡವಿಟ್

ನವದೆಹಲಿ: 1948ರ ಸೆನ್ಸಸ್ ಆ್ಯಕ್ಟ್ ಪ್ರಕಾರ ಗಣತಿ ಕಾರ್ಯವನ್ನು ಕೇಂದ್ರ ಸರ್ಕಾರ ಮಾತ್ರ ಕೈಗೊಳ್ಳುವಂಥದ್ದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದೆ. ಸರ್ವೋಚ್ಚ ನ್ಯಾಯಾಲಯಕ್ಕೆ ಸಲಿಸಿದ್ದ ಅಫಿಡವಿಟ್​ನಲ್ಲಿ ಅದು ಈ ವಿಷಯವನ್ನು ಪ್ರಸ್ತಾಪಿಸಿದೆ.

ಭಾರತದ ಸಂವಿಧಾನದ ನಿಬಂಧನೆಗಳು ಮತ್ತು ಅನ್ವಯವಾಗುವ ಕಾನೂನಿಗೆ ಅನುಗುಣವಾಗಿ ಎಸ್​ಸಿ/ಎಸ್​ಟಿ/ಎಸ್ಇಬಿಸಿ ಮತ್ತು ಒಬಿಸಿಗಳ ಉನ್ನತಿಗಾಗಿ ಎಲ್ಲ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧವಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ್ದ ಅಫಿಡವಿಟ್​ನಲ್ಲಿ ತಿಳಿಸಿದೆ.

ಜನಗಣತಿ ಅಥವಾ ಅದಕ್ಕೆ ಸಂಬಂಧಿಸಿದ ಯಾವುದೇ ಕಾರ್ಯವನ್ನು ಕೇಂದ್ರ ಸರ್ಕಾರ ಹೊರತುಪಡಿಸಿ ಬೇರೆ ಯಾರೂ ಮಾಡುವಂತಿಲ್ಲ ಎಂದು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮುಂದೆ ತಿಳಿಸಿದೆ. ಜಾತಿ ಗಣತಿಯನ್ನು ಆ. 6ರಲ್ಲಿ ಕೈಗೊಳ್ಳಲಾಗಿದೆ ಎಂದು ಬಿಹಾರ ಸರ್ಕಾರ ವಿಚಾರಣೆಯೊಂದರಲ್ಲಿ ಸುಪ್ರೀಂ ಕೋರ್ಟ್​ಗೆ ತಿಳಿಸಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ. -ಏಜೆನ್ಸೀಸ್