ನ್ಯೂಸ್

ಹಳೇ ಸರ್ಕಾರಿ ವಾಹನಗಳ ಬದಲಾವಣೆಗೆ ಕೇಂದ್ರದಿಂದ ನೆರವು

ನವದೆಹಲಿ: ರಾಜ್ಯ ಸರ್ಕಾರಗಳ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ಹಳೇ ವಾಹನಗಳು ಮತ್ತು ಆಂಬುಲೆನ್ಸ್​​ಗಳ ಬದಲಾವಣೆಗೆ ಕೇಂದ್ರ ಸರ್ಕಾರದಿಂದ ನೆರವು ಒದಗಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಕೇಂದ್ರ ಬಜೆಟ್​ ಮಂಡಿಸುತ್ತಾ, ವಾಯು ಮಾಲಿನ್ಯ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹಳೆಯ ಸರ್ಕಾರಿ ವಾಹನಗಳನ್ನು ಬದಲಾವಣೆ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದರು. 2070ರ ಹೊತ್ತಿಗೆ ಹೊಗೆ ಮುಕ್ತ ಭಾರತದ ಮಾಡಬೇಕೆಂಬ ಗುರಿ ಹೊಂದಲಾಗಿದೆ ಎಂದರು.