ನ್ಯೂಸ್

ಕೇಂದ್ರದ ಲಾಕ್​ಡೌನ್​ ಮಾರ್ಗಸೂಚಿ ಕಡ್ಡಾಯ ಪಾಲನೆಗೆ ಸೂಚನೆ

ರಮೇಶ್​ ಕುಮಾರ್​​ ಬಿ ಎಡಮೋಳೆ

ಬೆಂಗಳೂರು: ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಎರಡನೇ ಹಂತದಲ್ಲಿ ಲಾಕ್​ಡೌನ್ ಜಾರಿ ಮಾಡಿದ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ ಕಡ್ಡಾಯವಾಗಿ ಅನುಸರಿಸಬೇಕಾದ ಮಾರ್ಗಸೂಚಿ ಹೊರಡಿಸಿದೆ. ಇದನ್ನು ಸಡಿಲಗೊಳಿಸದೆ ಚಾಚೂತಪ್ಪದೇ ಪಾಲಿಸುವಂತೆ ಎಲ್ಲ ಜಿಲ್ಲಾಡಳಿಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.

ಮಾರ್ಗಸೂಚಿಯಲ್ಲಿ ಸೂಚಿಸಿರುವ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಪಾಲನೆಯಲ್ಲಿ ಲೋಪವಾದಲ್ಲಿ ಅಂತಹವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದೆಂದು ಎಲ್ಲ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಜಿಲ್ಲಾ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಕಂದಾಯ ಇಲಾಖೆ ಎಚ್ಚರಿಸಿದೆ.

ಕೇಂದ್ರ ಗೃಹ ಇಲಾಖೆ ಹೇಳಿದ್ದೇನು?

  • ವಿಪತ್ತು ನಿರ್ವಹಣೆ ಕಾಯ್ದೆ 2005ರಡಿ ಮಾರ್ಗಸೂಚಿ ಜಾರಿಯಲ್ಲಿದ್ದು, ಯಾವುದೇ ಕಾರಣಕ್ಕೂ ಉಲ್ಲಂಘನೆ ಆಗಬಾರದು.
  • ವಿವಿಧ ಕ್ಷೇತ್ರ ಮತ್ತು ಚಟುವಟಿಕೆಗೆ ನಿರ್ಬಂಧ ಹೇರಲಾಗಿದೆ. ಇದರ ಜಾರಿ ಸಂಬಂಧಪಟ್ಟ ಇಲಾಖೆ, ಸಚಿವರ ಜವಾಬ್ದಾರಿ.
  • ಮಾರ್ಗಸೂಚಿ ದುರ್ಬಲಗೊಳಿಸುವುದು ಅಥವಾ ಬದಿಗಿಟ್ಟು ಪರ್ಯಾಯ ಮಾರ್ಗ ಅನುಸರಿಸುವಂತಿಲ್ಲ.