ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರ ಮೇ 3ರ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಕೇಂದ್ರದ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಪಾಲ್ಗೊಳ್ಳಲಿದ್ದಾರೆ.
ಡಾ.ಕೆ.ಸುಧಾಕರ್ ಅವರ ಮೇ 3ರ ಪ್ರಚಾರ ಕಾರ್ಯಕ್ರಮಗಳ ವಿವರ ಹೀಗಿದೆ. ಮಧ್ಯಾಹ್ನ 3ಕ್ಕೆ ಮಂಚನಬಲೆ ಪಂಚಾಯತಿ, 4ಕ್ಕೆ ದಿಬ್ಬೂರು ಪಂಚಾಯತಿ, ಸಂಜೆ 5ಕ್ಕೆ ಅಂಗರೇಖನಹಳ್ಳಿ ಪಂಚಾಯತಿ, 6.30ರ ನಂತರ 8 ಗಂಟೆಯವರೆಗೆ ಚಿಕ್ಕಬಳ್ಳಾಪುರ ನಗರದ ವಿವಿಧ ವಾರ್ಡ್ಗಳಲ್ಲಿ ಪ್ರಚಾರಕಾರ್ಯ ನಡೆಯಲಿದೆ.