ನವದೆಹಲಿ : ಕೇಂದ್ರ ಸರ್ಕಾರವು 1989 ರ ಬ್ಯಾಚ್‌ನ ಪಂಜಾಬ್ ಕೇಡರ್‌ನ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು ಹೊಸ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ (ರಾ) ಮುಖ್ಯಸ್ಥರನ್ನಾಗಿ ನೇಮಿಸಿದೆ. ಜೂನ್ 30 ರಂದು ಮುಕ್ತಾಯಗೊಳ್ಳಲಿರುವ ರವಿ ಸಿನ್ಹಾ ಅವರ ಸ್ಥಾನವನ್ನು ಜೈನ್ ವಹಿಸಿಕೊಳ್ಳಲಿದ್ದಾರೆ.
ಅನುಭವಿ ಅಧಿಕಾರಿಯಾಗಿರುವ ಪರಾಗ್ ಜೈನ್ ಈ ಹಿಂದೆ ಚಂಡೀಗಢದ ಎಸ್‌ಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದರು. ಕೆನಡಾ ಮತ್ತು ಶ್ರೀಲಂಕಾದಲ್ಲಿ ರಾಜತಾಂತ್ರಿಕ ಪಾತ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.
ಆಪರೇಷನ್ ಸಿಂಧೂರ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು ನೂತನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಅವರು ಜುಲೈ 1ರಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಪಾಕಿಸ್ತಾನ ಸಶಸ್ತ್ರ ಪಡೆಗಳ ಕುರಿತು ನಿರ್ಣಾಯಕ ಗುಪ್ತಚರ ಮಾಹಿತಿಯನ್ನು ಸಂಗ್ರಹಿಸುವ ಮೂಲಕ ‘ಆಪರೇಷನ್ ಸಿಂಧೂರ್’ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಾಯುಯಾನ ಸಂಶೋಧನಾ ಕೇಂದ್ರದ ಮುಖ್ಯಸ್ಥರಾಗಿ ಪರಾಗ್ ಜೈನ್ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ. ಪಾಕಿಸ್ತಾನ ಹಾಗೂ ಭಾರತದ ನಡುವಿನ ಸಂಘರ್ಷದಲ್ಲಿ ಅವರು ಪ್ರಮುಖ ಕಾರ್ಯತಂತ್ರಗಳಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
(ಏಜೆನ್ಸೀಸ್)