ನ್ಯೂಸ್

ಬಿಲ್ಕಿಸ್​ ಬಾನೊ ಪ್ರಕರಣ; ನ್ಯಾಯಾಲಯಕ್ಕೆ ದಾಖಲೆ ಸಲ್ಲಿಸುವುದಾಗಿ ತಿಳಿಸಿದ ಗುಜರಾತ್​-ಕೇಂದ್ರ ಸರ್ಕಾರ

ನವದೆಹಲಿ: ಬಿಲ್ಕಿಸ್​ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಗಳಿಗೆ ಕ್ಷಮಾಪಣಾ ನೀಡಿರುವ ಕುರಿತು ಸುಪ್ರೀಂ ಕೋರ್ಟ್​ಗೆ ದಾಖಲೆ ಸಲ್ಲಿಸುವುದಾಗಿ ಗುಜರಾತ್-ಕೇಂದ್ರ ಸರ್ಕಾರ ತಿಳಿಸಿದೆ.

2002ರಲ್ಲಿ ಗೋದ್ರಾ ಗಲಭೆ ವೇಳೆ ಬಿಲ್ಕಿಸ್​ ಬಾನೋ ಮೇಲೆ ಅತ್ಯಾಚಾರ ಎಸಗಿ ಹಾಗೂ ಆಕೆಯ ಕುಟುಂಬಸ್ಥರನ್ನು ಹತ್ಯೆಗೈದ 11 ಆರೋಪಿಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಅವಧಿಗೂ ಮುನ್ನ ಆರೋಪಿಗಳಿಗೆ ಕ್ಷಮಾಪನಾ ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

ಹೊಸ ಪೀಠ ಸ್ಥಾಪನೆ

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ವಾದ-ಪ್ರತಿವಾದವನ್ನು ಆಲಿಸಿತ್ತು. ಈ ವೇಳೆ ಗುಜರಾತ್​​ ಹಾಗೂ ಕೇಂದ್ರ ಪ್ರಕರಣದ 11 ಆರೋಪಿಗಳ ಬಿಡುಗಡೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸಲ್ಲಿಸುವುದಾಗಿ ತಿಳಿಸಿವೆ.

ಬೇಸಿಗೆ ರಜೆಯ ನಂತರ ವಿಚಾರಣೆ ನಡೆಸುವುದಾಗಿ ಹೇಳಿದ ನ್ಯಾಯಾಲಯವು ಮೇ 9ಕ್ಕೆ ಸಮಯ ನಿಗದಿಪಡಿಸುವುದಾಗಿ ಹೇಳಿದೆ. ವಿಚಾರಣೆಗೆ ಸಂಬಂಧಿಸಿದಂತೆ ಹೊಸ ಪೀಠವನ್ನು ರಚಿಸಸಲಾಗುವುದು ಎಂದು ಅರ್ಜಿದಾರರ ಪರ ವಕೀಲರಿಗೆ ತಿಳಿಸಿದೆ.

ದಾಖಲೆಗಳನ್ನು ನೀಡುವುದಿಲ್ಲ

ಈ ಮೊದಲು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯಕ್ಕೆ ಆರೋಪಿಗಳಿಗೆ ಕ್ಷಮಾಧಾನ ನೀಡಿರುವ ಕುರಿತು ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿತ್ತು. ಇದಕ್ಕೆ ಆಕ್ಷೇಪಿಸಿದ ಸರ್ಕಾರದ ಪರ ವಕೀಲರು ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಾಧ್ಯ ಇಲ್ಲ ಎಂದು ಗುಜರಾತ್​ ಹಾಗೂ ಕೇಂದ್ರ ಸರ್ಕಾರ ತಿಳಿಸಿತ್ತು.

ನೀವು ಆರೋಪಿಗಳನ್ನು ಅವಧಿಗೂ ಮುನ್ನ ಬಿಡುಗಡೆ ಮಾಡಿರುವ ಬಗ್ಗೆ ಕಡತವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಇಲ್ಲವಾದಲ್ಲಿ ನಾವು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದರಾಗಿರಬೇಕು ಎಂದು ಕೇಂದ್ರ-ಗುಜರಾತ್​ ಸರ್ಕಾರಕ್ಕೆ ನ್ಯಾಯಪೀಠ ಚಾಟಿ ಬೀಸಿತ್ತು.