ಬೆಂಗಳೂರು: ಸಿಇಟಿ-24 ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಕೃಷಿಕರ ಕೋಟಾದ ಕ್ಲೇಮ್ಗಳನ್ನು ತಮ್ಮ ಆನ್‌ಲೈನ್ ಅರ್ಜಿಯಲ್ಲಿ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೊಂದು ಅವಕಾಶ ನೀಡಿದೆ.
ಏ.23ರಂದು ಮಧ್ಯಾಹ್ನ 2ಗಂಟೆಯಿಂದ ಏ.24ರ ಮಧ್ಯರಾತ್ರಿ12ಗಂಟೆವರೆಗೆ ಅವಕಾಶ ಇರುತ್ತದೆ. ಅಭ್ಯರ್ಥಿಗಳ ಕೋರಿಕೆ ಮೇರೆಗೆ ಈ ಅವಕಾಶ ನೀಡಿದ್ದು, ಸದುಪಯೋಗ ಪಡೆದುಕೊಳ್ಳಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.