ನ್ಯೂಸ್

ಸಿಇಟಿ, ನೀಟ್‌‌ಗೆ ಆನ್‌ಲೈನ್‌ ಕೋಚಿಂಗ್‌: 'ಗೆಟ್‌-ಸೆಟ್‌ ಗೋ'ಗೆ ಚಾಲನೆ ಕೊಟ್ಟ ಸಿಎಂ

arunakunigal

ಬೆಂಗಳೂರು: ಸಿಇಟಿ, ನೀಟ್‌ ಜತೆಗೆ ಜೆಇಇ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ಕೋಚಿಂಗ್‌ ನೀಡಲಾಗುವ 'ಗೆಟ್‌-ಸೆಟ್‌ ಗೋ' ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಚಾಲನೆ ನೀಡಿದರು.

ವಿಧಾನಸೌಧದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಈವರೆಗೆ ಸಿಇಟಿ ಮತ್ತು ನೀಟ್‌ಗೆ ಮಾತ್ರ ತರಬೇತಿ ನೀಡಲಾಗುತ್ತಿತ್ತು. ಈ ವರ್ಷದಿಂದ ಹೆಚ್ಚುವರಿಯಾಗಿ ಜೆಇಇ ವಿದ್ಯಾರ್ಥಿಗಳಿಗೂ ಆನ್‌ಲೈನ್‌ ತರಬೇತಿ ಕೊಡಲಾಗುವುದು. ಈ ಸೌಲಭ್ಯವನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಇದನ್ನೂ ಓದಿರಿ ವಿಡಿಯೋ ಕಾಲ್​ ರಿಸೀವ್​ ಮಾಡಿ ಹನಿಟ್ರ್ಯಾಪ್​ಗೆ ಬಿದ್ದ ಮಾಜಿ ಶಾಸಕನ ಪುತ್ರನಿಗೆ ಸಂಕಷ್ಟ!

ಈ ಕ್ರಮದಿಂದ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಸಮಗ್ರ ಕಲಿಕಾ ವ್ಯವಸ್ಥೆ‌ (ಎಲ್‌ಎಂಎಸ್) ಕೂಡ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ. ಈ ನಿಟ್ಟಿನಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಕೈಗೊಂಡ ಕ್ರಮಗಳು ಮೆಚ್ಚುವಂತಹದ್ದು ಎಂದು ಸಿಎಂ ಹೇಳಿದರು.

'ಗೆಟ್‌ ಸೆಟ್‌ ಗೋʼ ಬಗ್ಗೆ ಸಮಗ್ರ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಬರುವ ಶೈಕ್ಷಣಿಕ ವರ್ಷದಿಂದ ಇಡೀ ವರ್ಷಪೂರ್ತಿ 'ಗೆಟ್‌ ಸೆಟ್‌ ಗೋʼ ಮೂಲಕ ಕೋಚಿಂಗ್‌ ವ್ಯವಸ್ಥೆ ಇರುತ್ತದೆ ಎಂದರು. ಇದನ್ನೂ ಓದಿರಿ ನೀನಂದ್ರೆ ನನಗಿಷ್ಟ, ಪಾಸ್​ ಆಗಬೇಕಂದ್ರೆ ಕೋಣೆಗೆ ಬಾ ಎಂದು ರೇಪ್​ ಮಾಡಿದ ಪ್ರಾಧ್ಯಾಪಕ!

ಐಐಟಿಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳ ಪ್ರಮಾಣ ಹೆಚ್ಚಿಸುವ ಗುರಿಯೊಂದಿಗೆ ಈ ಹೆಜ್ಜೆ ಇಡಲಾಗುತ್ತಿದೆ. ಜೆಇಇ, ನೀಟ್‌ ಪರೀಕ್ಷೆಗಳಲ್ಲಿ ಕನ್ನಡ ವಿದ್ಯಾರ್ಥಿಗಳು ಹೆಚ್ಚು ರ್ಯಾಂಕ್ ಪಡೆಯುವ ನಿಟ್ಟಿನಲ್ಲಿ ಇದು ಸಹಕಾರಿ ಆಗಲಿದೆ. ಯಾವ ವಿದ್ಯಾರ್ಥಿಯೂ ಆರ್ಥಿಕ ಮುಗ್ಗಟ್ಟಿಗೆ ಸಿಲುಕದಂತೆ ವರ್ಷವಿಡೀ ಗೆಟ್‌ ಸೆಟ್‌ ಗೋ ಮೂಲಕ ಅಧ್ಯಯನ ಮಾಡಬಹುದು ಎಂದು ಡಿಸಿಎಂ ಹೇಳಿದರು.

ಕಲಿಕೆ, ಪರಿಷ್ಕರಣೆ ಹಾಗೂ ಪರೀಕ್ಷೆ ಪರಿಕಲ್ಪನೆಯಲ್ಲಿ 'ಗೆಟ್‌ ಸೆಟ್‌ ಗೋʼ ಕೋಚಿಂಗ್‌ ವ್ಯವಸ್ಥೆ ರೂಪಿಸಲಾಗಿದೆ. ಇದರಲ್ಲಿ ನೀಟ್‌, ಜೆಇಇ, ಸಿಇಟಿ ಪರೀಕ್ಷಾರ್ಥಿಗಳಿಗೆ ಅತ್ಯಗತ್ಯವಾದ ಅಧ್ಯಯನ ಸಾಮಗ್ರಿ ಜತೆಗೆ ವಿಡಿಯೋಗಳು, ಪಠ್ಯ ಸಾರಾಂಶ, ಸಂವಾದಾತ್ಮಕ ಪರೀಕ್ಷೆಗಳು ಇರುತ್ತವೆ. ಇಡೀ ದೇಶದಲ್ಲಿಯೇ ವಿದ್ಯಾರ್ಥಿಗಳಿಗಾಗಿ ಇಂಥ ಉಪಕ್ರಮ ಕೈಗೊಂಡ ಮೊದಲ ರಾಜ್ಯ ಕರ್ನಾಟಕ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು. ಇದನ್ನೂ ಓದಿರಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ

ಆಕ್ಸೆಸ್‌ ಹೇಗೆ?: 'ಗೆಟ್‌ ಸೆಟ್‌ ಗೋʼ ಆನ್‌ಲೈನ್‌ ಫ್ಲಾಟ್‌ಫಾರಂಗೆ ಸುಲಭವಾಗಿ ಪ್ರವೇಶ ಪಡೆಯಬಹುದು. ಕರ್ನಾಟಕವೂ ಸೇರಿದಂತೆ ಸಿಇಟಿ ಬರೆಯಲಿಚ್ಚಿಸುವ ದೇಶದ ಯಾವ ವಿದ್ಯಾರ್ಥಿ ಬೇಕಾದರೂ ತನ್ನ ವಿವರಗಳನ್ನು ನಮೂದಿಸಿ ಆಕ್ಸಿಸ್‌ ಮಾಡಬಹುದು. ವೆಬ್‌ಸೈಟ್‌, ಯುಟ್ಯೂಬ್‌ ಅಥವಾ ಗೆಟ್‌ ಸೆಟ್‌ ಗೋ ಆ್ಯಪ್‌ ಮೂಲಕ ಕೋಚಿಂಗ್‌ ಪಡೆಯಬಹುದು. ಈ ಆ್ಯಪ್‌ ಆಂಡ್ರಾಯ್ಡ್​, ಐಒಎಸ್‌ನಲ್ಲೂ ಲಭ್ಯ. ಇದಕ್ಕೆ ಗೂಗಲ್‌ ಆ್ಯಪ್‌ ಸ್ಟೋರ್‌ನಲ್ಲಿ 4.3 ರೇಟಿಂಗ್‌ ಇದೆ‌. ವಿದ್ಯಾರ್ಥಿಗಳು getcetgo.in ವೆಬ್ ಪೋರ್ಟ್, ಗೂಗಲ್ ಪ್ಲೇಸ್ಟೋರ್ ಆಂಡ್ರಾಯ್ಡ್​ ಆ್ಯಪ್ GetCETGO ಮೂಲಕ ಮಾಹಿತಿ ಪಡೆಯಬಹುದು ಹಾಗೂ ತಮ್ಮ ವಿವರಗಳನ್ನು ದಾಖಲಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದು ಡಿಸಿಎಂ ತಿಳಿಸಿದರು.