ನ್ಯೂಸ್

ಮುಂದಿನ ವಾರ ಸಿಇಟಿ ಫಲಿತಾಂಶ?

Mysuru Rural

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ 2020ನೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಮುಂದಿನ ವಾರ ಪ್ರಕಟವಾಗುವ ಸಾಧ್ಯತೆ ಇದೆ.

ಜು.30ರಿಂದ ಆ.1ರವರೆಗೆ ಸಿಇಟಿ ನಡೆದಿದ್ದು, ಮೌಲ್ಯಮಾಪನ ಕಾರ್ಯವೂ ಮುಗಿದಿದೆ. ಫಲಿತಾಂಶಕ್ಕೆ ಬೇಕಾದ ಸಿದ್ಧತೆಯನ್ನು ಕೆಇಎ ಅಧಿಕಾರಿಗಳು ಮಾಡಿಕೊಳ್ಳುತ್ತಿದ್ದಾರೆ. ಮುಂದಿನ ವಾರ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆಯೇ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಪರೀಕ್ಷೆ ಮುಗಿದ 15-20 ದಿನಗಳಲ್ಲಿ ಫಲಿತಾಂಶ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದರು.

ಆ ಪ್ರಕಾರವಾಗಿ ಮುಂದಿನ ವಾರದೊಳಗೆ ಫಲಿತಾಂಶ ನೀಡಬೇಕಿದೆ. ಸಿಇಟಿ ರ‍್ಯಾಂಕಿಂಗ್ ಆಧಾರದಲ್ಲಿ ಇಂಜಿನಿಯರಿಂಗ್ ಹಾಗೂ ವಿವಿಧ ವೃತ್ತಿಪರ ಕೋರ್ಸ್ (ವೈದ್ಯಕೀಯ, ದಂತವೈದ್ಯಕೀಯ ಹೊರತುಪಡಿಸಿ ಸರ್ಕಾರಿ ಕೋಟಾದ ಸೀಟುಗಳನ್ನು ಭರ್ತಿ ಮಾಡಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳ ದಾಖಲೆ ಪರಿಶೀಲನೆ ಕರೊನಾ ಹಿನ್ನೆಲೆಯಲ್ಲಿ ಆನ್​ಲೈನ್ ಮೂಲಕವೇ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.