ನ್ಯೂಸ್

I am God... God is great ಕನ್ನಡಿ ಮುಂದೆ ತನಗೆ ತಾನೇ ಪೂಜೆ ಮಾಡಿಸಿಕೊಂಡಿರುವ ಚೈತ್ರಾ ಕುಂದಾಪುರ

ಬೆಂಗಳೂರು: ( chaitra kundapur ) ಖಾಸಗಿವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್​ಬಾಸ್​​ ಕಾರ್ಯಕ್ರಮ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ನಾ ಮುಂದೆ ತಾ ಮುಂದೆ ಎಂದು ಸ್ಪರ್ಧಿಗಳು ಒಂಟಿಮನೆಯಲ್ಲಿ ಸೆಣಸಾಟ ನಡೆಸುತ್ತಿದ್ದಾರೆ.

ಒಬ್ಬರಿಗಿಂದ ಒಬ್ಬರು ವಿಭಿನ್ನವಾಗಿರುವ ಈ ಸ್ಪರ್ಧಿಗಳ ಮಧ್ಯೆ ಚೈತ್ರಾ ಕುಂದಾಪುರ್​​ ಅವರು ಒಂದು ಹೆಜ್ಜೆ ಮುಂದೆ ಹೋಗಿ I am God... God is great ಕನ್ನಡಿ ಮುಂದೆ ತನಗೆ ತಾನೇ ಪೂಜೆ ಮಾಡಿಕೊಂಡಿದ್ದಾರೆ. ಈ ಕುರಿತಾದ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗುತ್ತಿದೆ.

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ತನಗೆ ತಾನೇ ಪೂಜೆ ಮಾಡಿಕೊಂಡಿದ್ದು ವಿಶೇಷವಾಗಿದೆ. ದೇವರ ಪಕ್ಕದಲ್ಲಿ ನಿಂತು ಐ ಆ್ಯಮ್ ಗಾಡ್‌, ಗಾಡ್ ಈಸ್ ಗ್ರೇಟ್ ಅನ್ನೋ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಕನ್ನಡಿ ಮುಂದೆ ತನಗೆ ತಾನೇ ಪೂಜೆ ಮಾಡಿಸಿಕೊಂಡಿರುವ ಚೈತ್ರಾ ಕುಂದಾಪುರ ಅವರನ್ನು ಶಿಶಿರ್ ನೋಡಿ ಫುಲ್ ಶಾಕ್ ಆಗಿದ್ದಾರೆ. ಚೈತ್ರಾ ಅವರ ವಿಚಿತ್ರ ಪೂಜೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಬಿಗ್ ಬಾಸ್ ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಯಾಕೆ ಈ ಪೂಜೆ? I am God... God is great  ಎಂದು ಕಾಮೆಂಟ್​​ ಕೂಡಾ ಮಾಡುತ್ತಿದ್ದಾರೆ.

ಫೈರ್ ಬ್ರಾಂಡ್ ಚೈತ್ರಾ ಕುಂದಾಪುರ ಅವರು ಈಗ ತಮ್ಮ ವರಸೆ ಬದಲಾಯಿಸಿದ್ದಾರೆ. ಪಟ, ಪಟ ಅಂತ ಮಾತನಾಡುತ್ತಿದ್ದ ಚೈತ್ರಾ ಈ ಪೂಜಾ ಶೈಲಿಯ ಕುರಿತಾಗಿ ನೆಟ್ಟಿಗರು ಚರ್ಚೆ ಶುರು ಮಾಡಿದ್ದಾರೆ.