ನ್ಯೂಸ್

ಹಕ್ಕುಗಳನ್ನು ಪಡೆಯಲು ಸಬಲರಾಗಿ

reportermys

ಚಾಮರಾಜನಗರ: ಮಕ್ಕಳು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಸಬಲರಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗೀತಾಲಕ್ಷ್ಮೀ ಹೇಳಿದರು.


ನಗರದ ರೋಟರಿ ಭವನದಲ್ಲಿ ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಸ್ವಯಂ ಸೇವಾ ನೆಟ್‌ವರ್ಕ್ ಸಂಸ್ಥೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮೊಬಲಿಟಿ ಇಂಡಿಯಾ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ಸಂಸತ್ತು ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.


ಮಕ್ಕಳಿಗೆ ತಮ್ಮದೇ ಆದ ಹಕ್ಕುಗಳಿದ್ದು, ಅವುಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸುವುದು ಅವಶ್ಯಕವಾಗಿರುತ್ತದೆ ಎಂದರು.


ಇದೇ ವೇಳೆ ಮುಖ್ಯಮಂತ್ರಿಯವರ ಸಮಕ್ಷಮದಲ್ಲಿ ನಡೆಯುವ ರಾಜ್ಯಮಟ್ಟದ ಮಕ್ಕಳ ಹಕ್ಕುಗಳ ಸಂಸತ್ತು-2022ರ ಕಾರ್ಯಾಗಾರಕ್ಕೆ ಭಾಗವಹಿಸಲು ಚಾಮರಾಜನಗರ ಸೇಂಟ್ ್ರಾನ್ಸಿಸ್ ಇಂಗ್ಲಿಷ್ ಮಾಧ್ಯಮ ಶಾಲೆಯ ಸಾಯಿ ಚಿನ್ಮಯಿ ಮತ್ತು ಕೊಳ್ಳೇಗಾಲ ತಾಲೂಕಿನ ಹೊಸಮಾಲಂಗಿ ಸರ್ಕಾರಿ ಪ್ರೌಢಶಾಲೆಯ ಮೇಘಶ್ರೀ ಅವರನ್ನು ಆಯ್ಕೆ ಮಾಡಲಾಯಿತು.


ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗೋವಿಂದ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಸರಸ್ವತಿ, ಮೊಬಲಿಟಿ ಇಂಡಿಯಾ ಸಂಯೋಜಕ ರಾಜಣ್ಣ, ಶಿಕ್ಷಣ ಇಲಾಖೆಯ ನಿರಂಜನ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕುಮಾರ್, ವಿದ್ಯಾರ್ಥಿಗಳು ಇದ್ದರು.