ಚಾಮರಾಜನಗರ: 'ಯಾವನ್ಲಾ ನೀನು? ತಿ*... ಮುಚ್ಕಂಡು ಫೈಲ್ ತಗೋ ಬಾ...' ಹೀಗಂತ ಕಾರ್ಮಿಕ ಇಲಾಖೆ ಅಧಿಕಾರಿಯೊಬ್ಬರಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಬೈದಿದ್ದು, ಈ ದೃಶ್ಯ ವೈರಲ್ ಆಗಿದೆ.
ಕೊಳ್ಳೇಗಾಲ ತಾಲೂಕಿನ ಕಾಗಲವಾಡಿ ಮೊಳೆ ಗ್ರಾಮದಲ್ಲಿ ಇತ್ತೀಚಿಗೆ ಕಲ್ಲು ಕ್ವಾರಿಯಲ್ಲಿ ಬಂಡೆಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಹಿನ್ನೆಲೆ ಶನಿವಾರ ಗ್ರಾಮಕ್ಕೆ ಭೇಟಿ ನೀಡಿದ್ದ ಸಚಿವ ಸೋಮಣ್ಣ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇದೇ ವೇಳೆ ಮೃತರ ಕುಟುಂಬಕ್ಕೆ ಪರಿಹಾರದ ಹಣ ನೀಡಲು ವಿಳಂಬ ಆಗಿರುವ ವಿಚಾರಕ್ಕೆ ಗರಂ ಆದ ಸಚಿವರು, ಕಾರ್ಮಿಕ ಇಲಾಖೆ ಅಧಿಕಾರಿ ಮಹದೇವಸ್ಚಾಮಿಗೆ ಜನರ ಎದುರೇ ಬೈದರು.