ನ್ಯೂಸ್

ಡಿಬಿಟಿ ಮೂಲಕ ಹಣ ಜಮೆ

ಚಾಮರಾಜನಗರ: ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿ ಬದಲಾಗಿ ಡಿಬಿಟಿ ಮೂಲಕ ನಗದು ಹಣವನ್ನು ಪಾವತಿ ಮಾಡುವ ಸಂಬಂಧ 2024ರ ಜುಲೈ ಮಾಹೆಗೆ ಸಂಬಂಧಿಸಿದಂತೆ 2,20,096 ಪಡಿತರ ಚೀಟಿದಾರರ (6,83,153 ಫಲಾನುಭವಿಗಳಿಗೆ) ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ 11,01,60,340 ರೂ.ಗಳನ್ನು ಡಿಬಿಟಿ ಮೂಲಕ ಜಮೆ ಮಾಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಯೋಗಾನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.