ನ್ಯೂಸ್

ಶ್ರೀ ಚಾಮರಾಜೇಶ್ವರ ಹುಣ್ಣಿಮೆ ರಥೋತ್ಸವ

ಚಾಮರಾಜನಗರ: ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಹುಣ್ಣಿಮೆ ರಥೋತ್ಸವ ಶನಿವಾರ ರಾತ್ರಿ ಸಂಭ್ರಮದಿಂದ ನೆರವೇರಿತು.

ದೇವಸ್ಥಾನದ ಆವರಣದಲ್ಲಿ ಮಾಘ ಶುದ್ಧ ಪೂರ್ಣಿಮೆ ಅಂಗವಾಗಿ ಶ್ರೀ ಚಾಮರಾಜೇಶ್ವರಸ್ವಾಮಿಗೆ ಪಂಚಾಮೃತ ಅಭಿಷೇಕ ಮಾಡಿ, ಹೂವಿನ ಅಲಂಕಾರ ನೆರವೇರಿಸಿದರು. ಬಳಿಕ ವಿಶೇಷ ಪೂಜೆ ಕೈಂಕರ್ಯ ನೆರವೇರಿಸಿ ದೇವಸ್ಥಾನದ ಸುತ್ತಲೂ ರಥೋತ್ಸವ ಮೆರವಣಿಗೆ ನಡೆಸಲಾಯಿತು. ನಂತರ ದೇವಸ್ಥಾನದ ಮುಂಭಾಗದಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಸಾಮೂಹಿಕ ಭೋಜನ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನದ ಆಗಮಿಕ ದರ್ಶನ್, ಅರ್ಚಕ ರಾಮಕೃಷ್ಣ ಭಾರದ್ವಾಜ್, ಅನಿಲ್ ಕುಮಾರ್ ದೀಕ್ಷಿತ್, ಉತ್ಸವ ಸಮಿತಿ ಸದಸ್ಯರು ಭಾಗವಹಿಸಿದ್ದರು.