ಬೆಂಗಳೂರು : ( Bakrid) ಇಂದು ಬಕ್ರೀದ್ ಹಬ್ಬ. ಈ ಹಿನ್ನೆಲೆಯಲ್ಲಿ ಮುಸ್ಮಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಗೆ ಅಪಾರ ಸಂಖ್ಯೆಯಲ್ಲಿ ಸೇರುವ ಹಿನ್ನೆಲೆ ಬೆಂಗಳೂರು ಸಂಚಾರಿ ಪೊಲೀಸರು ನಗರದಲ್ಲಿ ಹಲವೆಡೆ ವಾಹನ ಸಂಚಾರ ಬದಲಾವಣೆ ಮಾಡಿದ್ದು, ಜೊತೆಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.
ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮಿಲ್ಲರ್ಸ್ ರಸ್ತೆಯಲ್ಲಿರುವ ಖುದ್ದುಸಾಬ್ ಈದ್ಗಾ ಮೈದಾನದಲ್ಲಿ (ಓಲ್ಡ್ ಹಜ್ ಕ್ಯಾಂಪ್) ಬಕ್ರೀದ್ ಹಬ್ಬದ ಪ್ರಾರ್ಥನೆ ಸಲ್ಲಿಸುವ ಪ್ರಯುಕ್ತ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಬೆಳಗ್ಗೆ 07 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಂಚಾರ ಮಾರ್ಪಾಡು ಮಾಡಲಾಗಿದೆ.
ಮಿಲ್ಲರ್ ರಸ್ತೆ ಕಂಟೋನ್ಸೆಂಟ್ ಅಂಡರ್ ಬ್ರಿಡ್ಜ್ನಿಂದ ಹೇನ್ಸ್ ರಸ್ತೆ ಜಂಕ್ಷನ್‌ವರೆಗೆ ಎರಡು ಬದಿಯ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಹೇನ್ಸ್ ರಸ್ತೆ ಜಂಕ್ಷನ್‌ನಿಂದ ಮಿಲ್ಲರ್ ರಸ್ತೆ ಕಂಟೋನ್ಸೆಂಟ್ ರೈಲ್ವೆ ಅಂಡರ್ ಬ್ರಿಡ್ಜ್ ವರೆಗೆ ಎರಡು ಬದಿಯ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ನಂದಿದುರ್ಗ ರಸ್ತೆ – ಬೆನ್ಸನ್ ಕ್ರಾಸ್ ರಸ್ತೆ ಜಂಕ್ಷನ್‌ನಿಂದ ಮಿಲ್ಲರ್ಸ್ ರಸ್ತೆ ಜಂಕ್ಷನ್‌ವರೆಗೆ (ಓಲ್ಡ್ ಹಜ್ ಕ್ಯಾಂಪ್) ಎರಡು ಬದಿಯ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಸಾಗರ್ ಆಸ್ಪತೆ ಜಂಕ್ಷನ್‌ನಿಂದ ಗುರಪ್ಪ ನವಾಳ ಜಂಕ್ಷನ್ ವರೆಗೆ. ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಸಾಯಿರಾಂ ಜಂಕ್ಷನ್‌ನಿಂದ ಗುರಪ್ಪನಪಾಳ್ಯ ಜಂಕ್ಷನ್ ವರೆಗೆ. 39ನೇ ಕ್ರಾಸ್ ರಸ್ತೆಯಲ್ಲಿ ಗುರಪ್ಪನಪಾಳ್ಯ ಜಂಕ್ಷನ್‌ನಿಂದ ರೆಡ್ಡಿ ಆಸ್ಪತ್ರೆ ಜಂಕ್ಷನ್ ವರೆಗೆ. ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ನವರೆಗೆ ಬಕ್ರೀದ್ ಹಬ್ಬದ ಪ್ರಾರ್ಥನೆ ಹಿನ್ನೆಲೆ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಬೆಳಗ್ಗೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಂಚಾರ ಮಾರ್ಪಾಡು ಮಾಡಲಾಗಿದೆ.
ವಾಹನಗಳ ಪಾರ್ಕಿಂಗ್ ತಾತ್ಕಾಲಿಕವಾಗಿ ನಿರ್ಬಂಧ
ಕಂಟೋನ್ಸೆಂಟ್ ರಸ್ತೆ, ಸೆಂಟ್ ಜಾನ್ಸ್ ಚರ್ಚ್ ರಸ್ತೆ, ಮಿಲ್ಲರ್ಸ್ ರಸ್ತೆ, ನಂದಿದುರ್ಗ ರಸ್ತೆ, ಹೇನ್ಸ್ ರಸ್ತೆ, ನೇತಾಜಿ ರಸ್ತೆ, ಹೆಚ್.ಎಂ.ರಸ್ತೆ, ಎಂ.ಎಂ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ಪಾರ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಪಾಟರಿ ಸರ್ಕಲ್‌ನಿಂದ ನಾಗವಾರ ಜಂಕ್ಷನ್‌ವರೆಗೆ ಎಲ್ಲಾ ಮಾದರಿಯ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದೆ.