ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚನ್ನಬಸಪ್ಪ ಅವರನ್ನು ಸದಸ್ಯರು ಹಾಗೂ ಮುಖಂಡರು ಅಭಿನಂದಿಸಿದರು. 
ನ್ಯೂಸ್

ಶಿವಪುರ ಗ್ರಾಪಂಗೆ ಚನ್ನಬಸಪ್ಪ ಅಧ್ಯಕ್ಷ

ಗುಂಡ್ಲುಪೇಟೆ: ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಚನ್ನಬಸಪ್ಪ ಅವಿರೋಧವಾಗಿ ಆಯ್ಕೆಯಾದರು.

ಗುರುವಾರ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಚನ್ನಬಸಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ರಂಗನಾಥ್ ಅವಿರೋಧ ಆಯ್ಕೆ ಪ್ರಕಟಿಸಿದರು.

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಜಗದೀಶಮೂರ್ತಿ, ಗ್ರಾಮ ಪಂಚಾಯಿತಿ ಸದಸ್ಯರಾದ ಸಿದ್ದರಾಜು, ಮಹದೇವಪ್ಪ, ಮಹೇಶ್, ಶಿವಣ್ಣ, ಸುಧಾ, ಗಾಯತ್ರಿ, ಚಿಕ್ಕತಾಯಮ್ಮ, ಮುಖಂಡರಾದ ಶಿವಕಂಠಮೂರ್ತಿ, ಬಾವಿಹಟ್ಟಿ ಶಿವಪ್ಪ, ಮಂಜಪ್ಪ, ಅಶೋಕ್ ಸೇರಿದಂತೆ ಹಲವರು ಇದ್ದರು.