ಶಿರಾಳಕೊಪ್ಪ: ಹತ್ತಿರದ ಉಡುಗಣಿ ಗ್ರಾಮದಲ್ಲಿ ಮಂಗಳವಾರ ಶ್ರೀ ರಾಘವೇಂದ್ರ ಸ್ವಾಮಿಗಳ ಉತ್ತರಾರಾಧನೆ ಮಹೋತ್ಸವದ ಅಂಗವಾಗಿ ರಥೋತ್ಸವದ ಅದ್ದೂರಿಯಾಗಿ ನೆರವೇರಿತು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಪೂಜೆ ಮತ್ತು ರಥೋತ್ಸವದಲ್ಲಿ ಭಾಗವಹಿಸಿದ್ದರು.
ಬೆಳಗ್ಗೆಯಿಂದಲೇ ಮಠದ ಆವರಣ ಹಾಗೂ ಬೀದಿಗಳಲ್ಲಿ ಭಕ್ತರ ಸಂಚಾರ ಜೋರಾಗಿತ್ತು. ಬಿ.ವೈ.ರಾಘವೇಂದ್ರ ಅವರು ದೇವರ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಭಕ್ತರೊಂದಿಗೆ ಮಾತುಕತೆ ನಡೆಸಿದ ಅವರು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಧರ್ಮನಿಷ್ಠೆ, ಒಗ್ಗಟ್ಟು ಮತ್ತು ಸೇವಾ ಭಾವನೆ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಮಠರಿಂದ ಸಂಸದರನ್ನು ಗೌರವಿಸಲಾಯಿತು. ಪೂಜೆ ಹಾಗೂ ರಥೋತ್ಸವದ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಸ್ವತಃ ಬಿ.ವೈ.ರಾಘವೇಂದ್ರ ಅವರು ಭಕ್ತರಿಗೆ ಪ್ರಸಾದ ಬಡಿಸಿ ತಾವೂ ಸೇವಿಸಿದರು.
ದೇವಸ್ಥಾನ ಸಮಿತಿ ಅಧ್ಯಕ್ಷ ರಾಜೀವ್, ಎಂಎಡಿಬಿ ಮಾಜಿ ಅಧ್ಯಕ್ಷರಾದ ಎ.ಎಸ್.ಪದ್ಮನಾಭ ಭಟ್, ಕೆ.ಎಸ್.ಗುರುಮೂರ್ತಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಎಲ್.ಬಸವರಾಜ್, ಮಾಜಿ ಅಧ್ಯಕ್ಷ ಚನ್ನವೀರಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ಸುಧೀರ್ ಮಾರವಳ್ಳಿ, ತಾಪಂ ಮಾಜಿ ಅಧ್ಯಕ್ಷ ಕೌಲಿ ಸುಬ್ರಹ್ಮಣ್ಯ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ, ಯುವ ಮೋರ್ಚಾ ಅಧ್ಯಕ್ಷ ವೀರಣ್ಣ ಗೌಡ, ಜಿಲ್ಲಾ ಕಾರ್ಯದರ್ಶಿ ಬೆಣ್ಣೆ ಪ್ರವೀಣ್, ರಾಮಚಂದ್ರ ನಾಯಕ್, ಪುರಸಭಾ ಮಾಜಿ ಅಧ್ಯಕ್ಷ ಚಂದ್ರಶೇಖರ್ ಇತರರಿದ್ದರು.