ನವದೆಹಲಿ: ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಕುಸಿತ (Gold Rates) ಕಂಡಿದೆ. ಇಂದು ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 550 ರೂ. ಇಳಿಕೆಯಾಗಿ 1,22,020 ರೂ. ತಲುಪಿದೆ. ಇನ್ನು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 500 ರೂ. ಕಡಿಮೆಯಾಗಿ, 1,11,880 ರೂ. ಆಗಿದೆ. ಇದರೊಟ್ಟಿಗೆ 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 410 ರೂ. ಇಳಿಕೆಯಾಗಿ 91,520 ರೂ. ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ
- ಇಂದು ದೆಹಲಿಯಲ್ಲಿ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,22,020 ರೂ.ಗೆ ತಲುಪಿದೆ. ಅದೇ ರೀತಿ, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,11,880 ರೂ. ಆಗಿದೆ.
- ಮುಂಬೈ, ಬೆಂಗಳೂರಿನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,22,020 ರೂ.ಗೆ ತಲುಪಿದೆ. ಅದೇ ರೀತಿ, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,11,880 ರೂ.ಗೆ ಬಂದು ನಿಂತಿದೆ.
- ಇನ್ನು ಹೈದರಾಬಾದ್ ಸೇರಿದಂತೆ ತೆಲುಗು ರಾಜ್ಯಗಳಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,22,020 ರೂ.ಗೆ ತಲುಪಿದೆ. ಅದೇ ರೀತಿ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,11,880 ರೂ. ಆಗಿದೆ.
ಬೆಳ್ಳಿ ಬೆಲೆ ಸ್ಥಿರ
- ದೆಹಲಿಯಲ್ಲಿ ಒಂದು ಕೆಜಿ ಬೆಳ್ಳಿ ಇಂದು 1,52,500 ರೂ.ಗೆ ತಲುಪಿದೆ.
- ಮುಂಬೈ, ಬೆಂಗಳೂರಿನಲ್ಲಿ ಪ್ರಸ್ತುತ ಒಂದು ಕೆಜಿ ಬೆಳ್ಳಿಯ ಬೆಲೆ 1,52,500 ರೂ. ಇದೆ.
- ಇನ್ನು ಚೆನ್ನೈ, ಹೈದರಾಬಾದ್, ತೆಲಂಗಾಣದಲ್ಲಿ ಪ್ರತಿ ಕೆಜಿ ಬೆಲೆ 1,65,000 ರೂ. ಆಗಿದೆ.
ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ.