ನ್ಯೂಸ್

ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ! 1 ಲಕ್ಷ ರೂ. ಗಡಿ ದಾಟಿದ್ರೂ ಅಚ್ಚರಿಯಿಲ್ಲ; ಹೀಗಿದೆ ನೋಡಿ ಇಂದಿನ ಚಿನ್ನ-ಬೆಳ್ಳಿ ದರ | Gold Rates

Gold Rates: ದೇಶದಲ್ಲಿ ಚಿನ್ನದ ಬೆಲೆ ಕುಸಿದರೆ ಸಾಕಪ್ಪ ಎಂದು ಹಪಾಹಪಿಸುವ ಜನರೇ ನಮ್ಮಲ್ಲಿ ಹೆಚ್ಚು. ಮಾರ್ಚ್​, ಏಪ್ರಿಲ್​ನಿಂದ ಮದುವೆ ಕಾರ್ಯಗಳು ಜೋರಾಗಲಿವೆ. ಹೀಗಿರುವಾಗ ಚಿನ್ನದ ಖರೀದಿ ಅತ್ಯವಶ್ಯಕ. ಆದರೆ, ದಿನದಿಂದ ದಿನಕ್ಕೆ ಗೋಲ್ಡ್​ ದರದಲ್ಲಿ ಏರಿಕೆ ಕಾಣುತ್ತಿದೆಯೇ ಹೊರತು ಇಳಿಕೆ ಎಂಬುದು ಬಹಳ ದೂರ ಸರಿಯುತ್ತಿದೆ. ಸದ್ಯ ಇದೇ ಚಿನ್ನ ಖರೀದಿದಾರರ ಬೇಸರಕ್ಕೆ ಕಾರಣವಾಗಿದೆ.

1 ಲಕ್ಷ ದಾಟಿದ್ರೂ ಅಚ್ಚರಿಯಿಲ್ಲ

ಕಳೆದ ವಾರದಲ್ಲಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡುಬಂದಿತ್ತು. ಇದನ್ನೇ ನಂಬಿದ್ದ ಗ್ರಾಹಕರು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆ ಆಗಬಹುದು ಎಂದು ನಿರೀಕ್ಷಿಸಿದ್ದರು. ಆದರೆ, ಅದಕ್ಕೂ ಈಗ ದೊಡ್ಡ ಕಲ್ಲು ಬಿದ್ದಿದೆ. ಇದಕ್ಕೆ ಕಾರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು. ಈ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಇದರೊಂದಿಗೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ದರ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಇದೇ ಪರಿಸ್ಥಿತಿ ಮುಂದುವರಿದರೆ. ಏಪ್ರಿಲ್ ಅಂತ್ಯದ ವೇಳೆಗೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಒಂದು ಲಕ್ಷ ರೂ. ದಾಟಿದರೂ ಆಶ್ಚರ್ಯವಿಲ್ಲ ಎಂದು ತಜ್ಞರು ತಿಳಿಸಿದ್ದಾರೆ.

ಇಂದು (ಮಾ.14) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,200 ರೂ.ಗೆ ಹೆಚ್ಚಳವಾಗಿದೆ. ಇನ್ನು 22 ಕ್ಯಾರೆಟ್ ಚಿನ್ನದ ಬೆಲೆ 1,100 ರೂ. ತಲುಪಿದೆ. ಮತ್ತೊಂದೆಡೆ, ಬೆಳ್ಳಿ ಬೆಲೆಯಲ್ಲಿಯೂ 2 ಸಾವಿರ ಹೆಚ್ಚಾಗಿದೆ. ಇದರೊಂದಿಗೆ ಬೆಳ್ಳಿ ದರವು ಹೊಸ ದಾಖಲೆಯತ್ತ ಮುಖಮಾಡಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಔನ್ಸ್ (31.10 ಗ್ರಾಂ) ಚಿನ್ನದ ಬೆಲೆ 2,985 ಡಾಲರ್​ ತಲುಪಿದೆ. ಇದರೊಂದಿಗೆ ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 89,780 ರೂ. ಆಗಿದೆ. ಮತ್ತೊಂದೆಡೆ, ಬೆಳ್ಳಿಯ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಪ್ರತಿ ಕೆಜಿ ಬೆಳ್ಳಿಯ ದರ 1,12,000 ರೂ.ಗೆ ತಲುಪಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆಗೆದುಕೊಳ್ಳುತ್ತಿರುವ ದಿಟ್ಟ ನಿರ್ಧಾರಗಳಿಂದಾಗಿ ಮುಂಬರುವ ವಾರಗಳಲ್ಲಿ ಚಿನ್ನ-ಬೆಳ್ಳಿಯ ಬೆಲೆಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ದರ ಹೀಗಿವೆ

  • ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 82,450 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 89,930 ರೂ. ತಲುಪಿದೆ.
  • ಇನ್ನು ಮುಂಬೈ, ಬೆಂಗಳೂರು ಮತ್ತು ಚೆನ್ನೈನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 82,300 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 89,780 ರೂ. ಆಗಿದೆ.
  • ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 82,300 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 89,780 ರೂ. ತಲುಪಿದೆ.

ಬೆಳ್ಳಿ ದರ

  • ನವದೆಹಲಿ, ಮುಂಬೈ ಮತ್ತು ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,03,000 ರೂ. ಆಗಿದೆ.
  • ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,12,000 ರೂ. ತಲುಪಿದೆ.
  • ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ ಬೆಳ್ಳಿ ಬೆಲೆ 1,12,000 ರೂ. ತಲುಪಿದೆ,(ಏಜೆನ್ಸೀಸ್).