ನ್ಯೂಸ್

ಶೀಘ್ರವೇ 2 ಲಕ್ಷ ರೂ. ದಾಟಿದರು ಆಶ್ಚರ್ಯವಿಲ್ಲ! ಮತ್ತೇ ಏರಿದ ಗೋಲ್ಡ್ ಬೆಲೆ; ಹೀಗಿದೆ ಇಂದಿನ ಚಿನ್ನ-ಬೆಳ್ಳಿ ದರ | Gold Rates

Gold Rates: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆಯೇ ಹೊರತು ಇಳಿಕೆಯತ್ತ ಮುಖ ಮಾಡುತ್ತಿಲ್ಲ. ಇದರ ಪರಿಣಾಮವಾಗಿ, ಗೋಲ್ಡ್ ಬೆಲೆಯು ಸಾರ್ವಕಾಲಿಕ ದಾಖಲೆಗಳನ್ನು ದಾಖಲಿಸುತ್ತಿವೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, 2026ರ ಆರಂಭದೊಳಗೆ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 2 ಲಕ್ಷ ರೂ. ತಲುಪಿದರೂ ಆಶ್ಚರ್ಯವಿಲ್ಲ.

ಅಮೆರಿಕದಲ್ಲಿ ಸರ್ಕಾರಿ ಸ್ಥಗಿತ ಮತ್ತು ಬಡ್ಡಿದರ ಕಡಿತದ ನಿರೀಕ್ಷೆಗಳು ಚಿನ್ನದ ಬೇಡಿಕೆಯನ್ನು ಹೆಚ್ಚಿಸಿವೆ. ಇದು ಚಿನ್ನದ ದರವನ್ನು ಸಾರ್ವಕಾಲಿಕ ದಾಖಲೆಗೆ ತಳ್ಳಿದೆ. ಕಳೆದ ಒಂದು ವಾರದಲ್ಲಿ, 10 ಗ್ರಾಂ ಚಿನ್ನದ ಬೆಲೆ ಸುಮಾರು 4,000 ರೂ. ಹೆಚ್ಚಾಗಿದೆ. ಇಂದು ಸಹ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದ್ದು, ಗ್ರಾಹಕರನ್ನು ಕೊಳ್ಳುವಿಕೆಯಿಂದ ದೂರ ಸರಿಯುವಂತೆ ಮಾಡಿದೆ.

ಇಂದು ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,200 ರೂ. ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 1,100 ರೂ. ಹೆಚ್ಚಾಗಿದೆ. ಮತ್ತೊಂದೆಡೆ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರವೂ ಗಣನೀಯವಾಗಿ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ 1,000 ರೂ. ಇಳಿದಿದೆ. ಆದರೆ, ಸೆಪ್ಟೆಂಬರ್ 22ರಿಂದ ಸೆ.30 ರವರೆಗೆ, ಒಂದು ಕೆಜಿ ಬೆಳ್ಳಿ ಬೆಲೆ 16,000 ರೂ. ಹೆಚ್ಚಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ

  • ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,08,900 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,18,790 ರೂ. ಆಗಿದೆ.
  • ಮುಂಬೈ, ಬೆಂಗಳೂರು, ಚೆನ್ನೈ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,08,750 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,18,640 ರೂ. ಆಗಿದೆ.
  • ಇನ್ನು ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣದಲ್ಲಿ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 1,08,750 ರೂ. ಇದ್ದರೆ, 24 ಕ್ಯಾರೆಟ್ ಬೆಲೆ 1,18,640 ರೂ. ಆಗಿದೆ.

ಬೆಳ್ಳಿ ಬೆಲೆ 1,000 ರೂ. ಇಳಿಕೆ

  • ದೆಹಲಿ, ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,50,000 ರೂ. ಆಗಿದೆ.
  • ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,60,000ರೂ. ಆಗಿದೆ.
  • ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,60,000 ರೂ. ಇದೆ,(ಏಜೆನ್ಸೀಸ್).

ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ.