Gold Price: ದೇಶದಲ್ಲಿ ಕೇವಲ ಚಿನ್ನ ಮಾತ್ರವಲ್ಲ, ಬೆಳ್ಳಿ ಬೆಲೆ ಕೂಡ ಗಗನಕ್ಕೇರುತ್ತಿವೆ. ಬೆಳ್ಳಿ ಸಾರ್ವಕಾಲಿಕ ದಾಖಲೆಗಳನ್ನು ನಿರ್ಮಿಸುತ್ತಿದ್ದರೆ, ಚಿನ್ನವು ಮಧ್ಯಮ ವರ್ಗದ ಜನರಿಂದ ದೂರ ಸರಿದಿದೆ.
ರೂಪಾಯಿ ದುರ್ಬಲಗೊಳ್ಳುವುದರಿಂದ ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಹೆಚ್ಚಾಗುತ್ತಿವೆ. ಇಂದು (ಸೆ.29) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 24 ಕ್ಯಾರೆಟ್ ಚಿನ್ನದ 10 ಗ್ರಾಂ 920 ರೂ. ಹೆಚ್ಚಾಗಿದೆ. ಇನ್ನು 22 ಕ್ಯಾರೆಟ್ ಗೋಲ್ಡ್ ಬೆಲೆ 850 ರೂ. ಏರಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರವೂ ಹೆಚ್ಚಾಗಿದೆ. ಒಂದು ಔನ್ಸ್ ಚಿನ್ನದ 57 ಡಾಲರ್ ಆಗಿದೆ. ಇದರೊಂದಿಗೆ, ಪ್ರಸ್ತುತ ಒಂದು ಔನ್ಸ್ ಚಿನ್ನವು 3,817 ಡಾಲರ್‌ಗಳಲ್ಲಿ ವಹಿವಾಟು ನಡೆಸುತ್ತಿದೆ.
ಮತ್ತೊಂದೆಡೆ, ಬೆಳ್ಳಿಯ ಬೆಲೆಯೂ ಆಕಾಶದತ್ತ ಮುಖಮಾಡಿದೆ. ಇಂದು ಒಂದೇ ದಿನ, ಕೆಜಿ ಬೆಳ್ಳಿ ಬೆಲೆ 1,000 ರೂ. ಹೆಚ್ಚಾಗಿದೆ. ಇದು ಸಾರ್ವಕಾಲಿಕ ದಾಖಲೆಯನ್ನು ದಾಖಲಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಮುನ್ಸೂಚನೆಯನ್ನು ನೀಡಿದೆ.
ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ.