ನ್ಯೂಸ್

ಚೆಕ್ ಪೋಸ್ಟ್ ಗಳ ಕಾರ್ಯನಿರ್ವಹಣೆ ಪರಿಶೀಲನೆ

ಮಂಜುನಾಥ ಅಂಗಡಿ

ಧಾರವಾಡ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾಚಣಾ ಅಕ್ರಮಗಳನನ್ನು ತಡೆಗಟ್ಟಲು ಜಿಲ್ಲೆಯ ವಿವಿಧೆಡೆ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ನಗರ ವ್ಯಾಪ್ತಿಯಲ್ಲಿ ಇರುವ ೧೨ ಚೆಕ್‌ಪೊಸ್ಟ್ಗಳಿಗೆ ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಗುರುವಾರ ಸಂಜೆ ಭೇಟಿ ನೀಡಿ ಕಾರ್ಯವೈಖರಿಯನ್ನು ಪರಿಶೀಲಿಸಿದರು.
ಪ್ರತಿಯೊಂದು ವಾಹನವನ್ನು ಕಡ್ಡಾಯವಾಗಿ ತಪಾಸಣೆ ಮಾಡಬೇಕು. ಪೂರಕ ದಾಖಲೆ ಇಲ್ಲದ ಹಣ, ವಸ್ತು, ಉಡುಗೊರೆಗಳನ್ನು ಜಪ್ತಿ ಮಾಡಬೇಕು. ಅಽಕಾರಿ, ಸಿಬ್ಬಂದಿ ನಿಗದಿತ ಸಮಯಕ್ಕೆ ಹಾಜರಾಗಿ ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯ ನಿರ್ವಹಣೆಯ ಮೇಲೆ ಜಿಲ್ಲಾ ಕಂಟ್ರೋಲ್ ರೂಮ್‌ನಲ್ಲಿ ನಿರಂತರ ನಿಗಾ ವಹಿಸಲಾಗುತ್ತಿದೆ. ಕರ್ತವ್ಯ ಲೋಪ ಕಂಡುಬAದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.