ಮುಂಬೈ: ಮರಾಠ ಯೋಧ ರಾಜ ಛತ್ರಪತಿ ಸಂಭಾಜಿ ಅವರ ಜೀವನಾಧಾರಿತ ವಿಕ್ಕಿ ಕೌಶಲ್ ಅಭಿನಯದ ಛಾವಾ(Chhaava) ಸಿನಿಮಾದ ಪವರ್ ಫುಲ್ ಟ್ರೈಲರ್ ಇತ್ತೀಚೆಗಷ್ಟೆ ಬಿಡುಗಡೆಯಾಗಿದೆ. ಇದನ್ನು ನೋಡಿದ ಪ್ರೇಕ್ಷಕರಲ್ಲಿ ಚಿತ್ರದ ಬಗ್ಗೆ ಕುತೂಹಲ ಹೆಚ್ಚಿದೆ. ಈ ಮಧ್ಯೆ ಮಹಾರಾಷ್ಟ್ರ ಸರ್ಕಾರದ ಸಚಿವ ಉದಯ್ ಸಮಂತ್ ಛಾವಾ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ಮಾಡುವ ಮೊದಲು ಕೆಲವು ತಜ್ಞರಿಗೆ ಮತ್ತು ಇತಿಹಾಸಕಾರರಿಗೆ ತೋರಿಸಬೇಕು ಎಂದು ಹೇಳಿದ್ದಾರೆ.
ಇದನ್ನು ಓದಿ: ಮಾರಣಾಂತಿಕ ದಾಳಿ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡ ಸೈಫ್; ನಟನ ಬಿಗಿ ಭದ್ರತೆ ವಿಡಿಯೋ ವೈರಲ್ | Saif Ali Khan
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ವೊಂದನ್ನು ಮಾಡಿರುವ ಸಚಿವ ಉದಯ್ ಸಮಂತ್, ಈ ವಿಷಯದಲ್ಲಿ ತಕ್ಷಣ ಕ್ರಮತೆಗೆದುಕೊಳ್ಳಬೇಕು. ಸಿನಿಮಾದಲ್ಲಿ ಯಾವುದೇ ಆಕ್ಷೇಪಾರ್ಹ ದೃಶ್ಯವಿದ್ದರೆ ಅದನ್ನು ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕಬೇಕು. ಧರ್ಮ ಮತ್ತು ಸ್ವಾತಂತ್ರ್ಯ ರಕ್ಷಕ ಛತ್ರಪತಿ ಸಂಭಾಜಿ ಮಹಾರಾಜರ ಜೀವನಾಧಾರಿತ ಹಿಂದಿ ಚಿತ್ರ ತಯಾರಾಗುತ್ತಿರುವುದು ಸಂತಸದ ವಿಷಯ.
ಛತ್ರಪತಿಯ ಇತಿಹಾಸವನ್ನು ಅರ್ಥ ಮಾಡಿಕೊಳ್ಳುವ ಅವಕಾಶ ಜಗತ್ತಿಗೆ ಸಿಗಲಿದೆ. ಚಿತ್ರದಲ್ಲಿ ಕೆಲವು ಆಕ್ಷೇಪಾರ್ಹ ದೃಶ್ಯಗಳಿವೆ ಎಂದು ಹಲವರು ಹೇಳುತ್ತಿದ್ದರೂ. ಅದಕ್ಕಾಗಿಯೇ ಈ ಚಿತ್ರವನ್ನು ತಜ್ಞರಿಗೆ ತೋರಿಸದೆ ಬಿಡುಗಡೆ ಮಾಡಬಾರದು ಎಂದು ಹೇಳುತ್ತಿದ್ದೇನೆ ಎಂದಿದ್ದಾರೆ. ಶಿವಾಜಿ ಮಹಾರಾಜ್ ಮತ್ತು ಸಂಭಾಜಿ ಮಹಾರಾಜರ ಗೌರವಕ್ಕೆ ಧಕ್ಕೆ ತರುವುದನ್ನು ಸಹಿಸುವುದಿಲ್ಲ. ಹಾಗಾಗದಿದ್ದರೆ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.
ಛತ್ರಪತಿ ಸಂಭಾಜಿ ಮಹಾರಾಜರ ಜೀವನಾಧಾರಿತ ಈ ಚಿತ್ರ ಬಹಳ ದಿನಗಳಿಂದ ಸುದ್ದಿಯಲ್ಲಿದೆ. ಈ ಚಿತ್ರದಲ್ಲಿ ವಿಕ್ಕಿ ಕೌಶಲ್ ಜತೆ ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಬಿಡುಗಡೆಗೂ ಮುನ್ನವೇ ಚಿತ್ರಕ್ಕೆ ಸಂಬಂಧಿಸಿದ ಹೇಳಿಕೆ ಹೊರಬಿದ್ದಿರುವ ರೀತಿ ನೋಡಿದರೆ ಬಿಡುಗಡೆಗೂ ಮುನ್ನವೇ ಸಿನಿಮಾ ವಿವಾದಕ್ಕೆ ಸಿಲುಕುವ ಸಾಧ್ಯತೆ ಇದೆ ಎನ್ನಬಹುದು.(ಏಜೆನ್ಸೀಸ್)