ನ್ಯೂಸ್

ಮುಖ್ಯಮಂತ್ರಿ ಮುಂದುವರಿಕೆ ವಿಚಾರ; ಪಕ್ಷದ ಹೈಕಮಾಂಡ್​ನ ತೀರ್ಮಾನವೇ ಅಂತಿಮ: CM ಸಿದ್ದರಾಮಯ್ಯ

ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​ ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಈ ವಿಷಯದ ಬಗ್ಗೆ ಪಕ್ಷದ ಹೈಕಮಾಂಡ್​ನ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು CM ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಡಿಸಿಎಂ ರಾಜಣ್ಣರವರ ನಡುವೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವ ಬಗ್ಗೆ ನಡೆಯುತ್ತಿರುವ ವಾದದ ಕುರಿತು ಪ್ರತಿಕ್ರಿಯೆ ನೀಡಿದರು.

ದಲಿತ ಮುಖಂಡರೊಂದಿಗೆ ಸಭೆ

ದಲಿತ ಮುಖಂಡರೊದಂದಿಗಿನ ಬಜೆಟ್ ಪೂರ್ವ ಸಭೆಯ ಬಗ್ಗೆ ಉತ್ತರಿಸಿ, ಇಂದು ದಲಿತ ಮುಖಂಡರೊಂದಿಗೆ ಸಭೆ ನಡೆಸಿ ಅವರ ಸಲಹೆ ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದರು. ವಿಧಾನಪರಿಷತ್ತಿನ ಸದಸ್ಯರ ನಾಮನಿರ್ದೇಶನ ಕುರಿತು ಚರ್ಚೆಯನ್ನು ತನ್ನ ಅನಾರೋಗ್ಯದ ನಿಮಿತ್ತ ನಡೆಸಲು ಸಾಧ್ಯವಾಗಿಲ್ಲ, ಮುಂದೆ ಈ ಕುರಿತು ನವದೆಹಲಿಗೆ ಹೋಗುವ ಸಾಧ್ಯತೆಯಿದೆಯೆಂದು ಸಿಎಂ ತಿಳಿಸಿದರು.