ನ್ಯೂಸ್

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಎನ್. ಭೃಂಗೀಶ್​ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪರ ಮಾಧ್ಯಮ ಸಲಹೆಗಾರರಾಗಿ ಎನ್.ಭೃಂಗೀಶ್​ ಅವರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ನಂತರ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡಿದ್ದ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಅವರು ಇತ್ತೀಚಿಗಷ್ಟೇ (ನ.19) ಸಿಎಂ ಯಡಿಯೂರಪ್ಪಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು.

ಮಹದೇವ್​ ಪ್ರಕಾಶ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ವಾರ್ತಾ‌ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನಿರ್ದೇಶಕ ಎನ್.ಭೃಂಗೀಶ್​ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸುವಂತೆ ಸಿಎಂ ಮುಖ್ಯ ಕಾರ್ಯದರ್ಶಿಗೆ ಬಿಎಸ್​ವೈ ಮಂಗಳವಾರ ಸೂಚಿಸಿದ್ದರು. ಅದರಂತೆ ಎನ್.ಭೃಂಗೀಶ್​ ಅವರನ್ನು ತತ್​ಕ್ಷಣದಿಂದಲೇ ಜಾರಿಗೆ ಬರುವಂತೆ ಸಿಎಂ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿ ಇಂದು(ಬುಧವಾರ) ಅಧಿಕೃತ ಆದೇಶ ಹೊರಡಿಸಲಾಗಿದೆ.

ವೈಯಕ್ತಿಕ ಕಾರಣಗಳಿಂದ ಮಹದೇವ ಪ್ರಕಾಶ್ ರಾಜೀನಾಮೆ ನೀಡಿದ್ದರು. ರಾಜೀನಾಮೆ ಪತ್ರದಲ್ಲಿ ಅವರು ಯಾವುದೇ ಕಾರಣಗಳನ್ನು ನೀಡಿರಲಿಲ್ಲ.