ನ್ಯೂಸ್

ಮಹಡಿಯ ಬಾಲ್ಕನಿಯಿಂದ ಬಿದ್ದು ಮಗು ಸಾವು

ಬೆಂಗಳೂರು: ಕೋಣನಕುಂಟೆಯ ವಸತಿ ಕಟ್ಟಡದ ಎರಡನೇ ಮಹಡಿಯ ಬಾಲ್ಕನಿಯಿಂದ ಆಕಸ್ಮಿಕವಾಗಿ ಬಿದ್ದು ಮೂರು ವರ್ಷದ ಮಗು ಮೃತಪಟ್ಟಿದೆ.

ವೀವರ್ಸ್ ಕಾಲನಿಯ ನಿವಾಸಿಗಳಾದ ವಿನೋದ್ ಕುಮಾರ್ ಮತ್ತು ಕಾವ್ಯಾ ದಂಪತಿ ಪುತ್ರ ವೇಹಂತ್(೩) ಮೃತ ಬಾಲಕ. ದಂಪತಿಯು ಖಾಸಗಿ ಐ.ಟಿ ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದಾರೆ.

ಮಗುವಿನ ಪಾಲಕರು ತಮ್ಮ ಮನೆಯಲ್ಲಿ ನಡೆಯುತ್ತಿದ್ದ ಕುಟುಂಬ ಕಾರ್ಯಕ್ರಮವೊಂದರಲ್ಲಿ ಬಿಜಿಯಾಗಿದ್ದರು. ಮನೆಯಲ್ಲಿ ಆಟವಾಡುತ್ತಿದ್ದ ಮಗು ಶನಿವಾರ ಸಂಜೆ ೬.೩೦ ಕ್ಕೆ ಬಾಲ್ಕನಿ ಬಳಿ ಬಂದಿದ್ದು, ಈ ವೇಳೆ ಆಕಸ್ಮಿಕವಾಗಿ ಜಾರಿ ಕೆಳಗೆ ಬಿದ್ದಿದ್ದು, ಕೂಡಲೇ ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಗು ಚಿಕಿತ್ಸೆ ಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಅಹಜಸಾವು ಪ್ರಕರಣ ದಾಖಲಾಗಿದೆ. ಮಗುವನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು.