ಮಮದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಮೂಹ ಕಸ್ಟರ್​ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಅಮರನಾಥ ಜಾರಕಿಹೊಳಿ ಉದ್ಘಾಟಿಸಿದರು. ಭೀಮಗೌಡ ಪೊಲೀಸಗೌಡರ ಇತರರಿದ್ದರು. 
ನ್ಯೂಸ್

ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲಿ

ಮಮದಾಪುರ: ಮಕ್ಕಳ ಶೈಕ್ಷಣಿಕ ಸಾಮರ್ಥ್ಯ ವೃದ್ಧಿಗೆ ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ. ಜತೆಗೆ ಮಕ್ಕಳ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆಯಾಗಿದೆ ಎಂದು ಬಿಡಿಸಿಸಿ ಬ್ಯಾಂಕ್​ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಮೂಹ ಕ್ಲಸ್ಟರ್​ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಶೈಣಿಕ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಮಹತ್ವಾಕಾಂ ಯೋಜನೆ ರೂಪಿಸಿದ್ದು, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿವೆ. ಹೀಗಾಗಿ, ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದರು.
ಮುಖಂಡ ಭೀಮಗೌಡ ಪೊಲೀಸಗೌಡರ ಮಾತನಾಡಿ, ಗ್ರಾಮದ ಸರ್ಕಾರಿ ಶಾಲೆ ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳನ್ನು ನೀಡುವ ಜತೆಗೆ ಅತ್ಯಾಧುನಿಕ ಸೌಲಭ್ಯ ಹೊಂದಿ ತಾಲೂಕಿನಲ್ಲೇ ಮಾದರಿಯಾಗಿದೆ ಎಂದರು.
ವೀರ ವನಿತೆ ಒನಕೆ ಓಬವ್ವ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜಿಪಂ ಮಾಜಿ ಸದಸ್ಯರಾದ ಟಿ.ಆರ್​.ಕಾಗಲ್​, ಮಡ್ಡೆಪ್ಪ ತೋಳಿನವರ, ಗ್ರಾಪಂ ಅಧ್ಯೆ ಅನ್ನಪೂರ್ಣಾ ಭಜಂತ್ರಿ, ಉಪಾಧ್ಯೆ ಸುನಂದಾ ಮುರುಗೋಡ, ಸದಸ್ಯರಾದ ಸುರೇಶ ಸನದಿ, ಕೆಂಪಣ್ಣ ಮೈಲನ್ನವರ, ಶಿವನಗೌಡ ಕಮತ, ರಮೇಶ ಗಾಣಗಿ, ವೀರಭದ್ರ ಮೈಲನ್ನವರ, ಎಸ್​ಡಿಎಂಸಿ ಅಧ್ಯ ಮಹೇಶ ಪಾಟೀಲ, ಅಶೋಕ ಗೋಪಾಳಿ, ಸಿಆರ್​ಪಿ ಎಸ್​.ಎಸ್​.ದಂಡಾಪುರ, ಮುಖ್ಯಶಿಕರಾದ ಎಸ್​.ಪಿ.ಥೋರಾತ್​, ಆರ್​.ಬಿ.ಬೆಟಗೇರಿ ಇತರರಿದ್ದರು.