ವುಹಾನ್: ಚೀನಾದಲ್ಲಿ ಕೊರೊನಾ ವೈರಸ್ನ ದಾಳಿಗೆ ತುತ್ತಾದವರು ಗುಣಮುಖರಾಗುತ್ತಿದ್ದು, ನೂತನ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಚಿಕಿತ್ಸೆಗೆಂದು ತಾತ್ಕಾಲಿಕವಾಗಿ ತೆರೆಯಲಾಗಿದ್ದ 16 ಆಸ್ಪತ್ರೆಗಳನ್ನು ಮುಚ್ಚಲಾಗಿದೆ.
ಡಿಸೆಂಬರ್ ತಿಂಗಳಿನಿಂದ ಚೀನಾದಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದ್ದು ಲಕ್ಷಕ್ಕೂ ಅಧಿಕ ಜನರಲ್ಲಿ ವೈರಸ್ ಇರುವುದು ಪತ್ತೆಯಾಗಿತ್ತು. ರೋಗಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿ ಅಲ್ಲಿನ ಸರ್ಕಾರ ಅನೇಕ ವಸ್ತು ಪ್ರದರ್ಶನಾಲಗಳನ್ನು ಮತ್ತು ಕೆಲ ಸಾರ್ವಜನಿಕ ಸ್ಥಳಗಳನ್ನು ತಾತ್ಕಾಲಿಕ ಆಸ್ಪತ್ರೆಗಳಾಗಿ ಬದಲಾಯಿಸಿತ್ತು. ತಾತ್ಕಾಲಿಕ ಸೇವೆಗೆಂದು ಆರಂಭವಾದ 16 ಆಸ್ಪತ್ರೆಗಳಲ್ಲಿ ಕೊರೊನಾ ವೈಸರ್ ಸೋಂಕಿತರಿಗೆ ಅಗತ್ಯ ಚಿಕಿತ್ಸೆಯನ್ನು ನೀಡಿ ಗುಣಮುಖರನ್ನಾಗಿ ಮಾಡಲಾಗಿತ್ತು.
ಇಂದು 16 ತಾತ್ಕಾಲಿಕ ಆಸ್ಪತ್ರೆಗಳು ಬಾಗಿಲು ಮುಚ್ಚಿದ್ದು, ಅದರಲ್ಲಿದ್ದ ಕೆಲ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್)