HMPV : ಚೀನಾದಲ್ಲಿ ಹರಡಿದೆ ಎನ್ನಲಾದ HMPV( ಹ್ಯೂಮನ್ ಮೆಟಾಪ್ನ್ಯೂಮೋವೈರಸ್ ) ವೈರಸ್ ಇದೀಗ ಭಾರತಕ್ಕೆ ಲಗ್ಗೆ ಇಟ್ಟಿದ್ದು, ಬೆಂಗಳೂರು ಸೇರಿದಂತೆ ಭಾರತದಲ್ಲಿ ಮೂರನೇ ಪ್ರಕರಣ ದಾಖಲಾಗಿದೆ.
ಗುಜರಾತ್ನ ಅಹಮದಾಬಾದ್ನಲ್ಲಿ 2 ತಿಂಗಳ ಮಗುವಿಗೆ HMPV ಸೋಂಕು ಪತ್ತೆಯಾಗಿರುವುದಾಗಿ ಧೃಢವಾಗಿದೆ. ಈ ಮುಂಚೆ ಇಂದೇ ಬೆಂಗಳೂರಿನಲ್ಲಿ 3 ಮತ್ತು 8 ತಿಂಗಳ ಮಗುವಿಗೆ ವೈರಸ್ ಪತ್ತೆಯಾಗಿದ್ದು, ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ಈ ಕೂಡಲೇ ಕೋಚ್ ಸ್ಥಾನದಿಂದ ಗಂಭೀರ್ರನ್ನು ಕೆಳಗಿಳಿಸಿ! ಬಿಸಿಸಿಐಗೆ ಮಾಜಿ ಕ್ರಿಕೆಟಿಗನ ಸಲಹೆ | Gautam Gambhir
ಇಡೀ ಜಗತ್ತನ್ನೇ ಗಢಗಢ ನಡುಗಿಸಿದ ಮಹಾಮಾರಿ ಕರೊನಾ ವೈರಸ್ ತವರು ಚೀನಾದಿಂದ ಇದೀಗ ಮತ್ತೊಂದು ವೈರಸ್ ಹರಡುತ್ತಿದೆ. ಭಾರತದಲ್ಲಿ ಈ ವೈರಸ್ ಪತ್ತೆಯಾಗಿರುವುದು ಭಾರಿ ಆತಂಕಕ್ಕೆ ದಾರಿ ಮಾಡಿಕೊಟ್ಟಿದೆ.
ಈ ವೈರಸ್ ಎಲ್ಲ ವಯಸ್ಸಿನ ವ್ಯಕ್ತಿಗಳಲ್ಲಿ ಉಸಿರಾಟದ ಸಮಸ್ಯೆಗಳನ್ನು ಉಂಟುಮಾಡಬಹುದು. ಆದರೂ ಚಿಕ್ಕ ಮಕ್ಕಳು, ಹಿರಿಯರು ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವವರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ.
ಈ ವೈರಸ್ನ ಲಕ್ಷಣಗಳು ಯಾವುವೆಂದರೆ, ಕೆಮ್ಮು, ಜ್ವರ, ಮೂಗು ಕಟ್ಟುವುದು ಮತ್ತು ಉಸಿರಾಟದ ತೊಂದರೆ ಸೇರಿದಂತೆ ಇನ್ನಿತರ ಲಕ್ಷಣಗಳಿವೆ. ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಈ ವೈರಸ್ ಬಗ್ಗೆ ಹೆಚ್ಚು ಭಯಪಡುವ ಅಗತ್ಯವಿಲ್ಲ ಎಂದು ಹೇಳಿದೆ.
HMPV ವೈರಸ್ ಚೀನಾದಲ್ಲಿ ಪತ್ತೆಯಾಗಿದೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆ ವಿಶ್ವದ ಎಲ್ಲ ರಾಷ್ಟ್ರಗಳು ಅಲರ್ಟ್ ಆಗಿವೆ. ಭಾರತ ಕೂಡ ವೈರಸ್ ಬಗ್ಗೆ ಎಚ್ಚರಿಕೆಯನ್ನು ವಹಿಸಿದೆ.(ಏಜೆನ್ಸೀಸ್).