ನ್ಯೂಸ್

ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕ ಅಂಗೀಕಾರ

Bengaluru - Political - Shivananda Tagadur

ಬೆಂಗಳೂರು:
ವಿಧಾನ ಪರಿಷತ್‌ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ನಡುವೆಯೇ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮಂಡಿಸಿದರು. ಪರ್ಯಾಲೋಚಿಸಿದ ನಂತರ ಸದನ ಅಂಗೀಕರಿಸಿತು.

ನೀರಾವರಿ ತಿದ್ದುಪಡಿ ವಿಧೇಯಕ
ಕರ್ನಾಟಕ ನೀರಾವರಿ (ತಿದ್ದುಪಡಿ) ವಿಧೇಯಕವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಡಿಸಿದರು. ವಿಧೇಯಕವನ್ನು ಪರ್ಯಾಲೋಚಿಸಿದ ನಂತರ ಧ್ವನಿಮತದಿಂದ ಅಂಗೀಕರಿಸಲಾಯಿತು.