ವಿಜಯಪುರ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಕಾವು ಇನ್ನೂ ಆರಿಲ್ಲ. ಇಂದು ಮುದ್ದೇಬಿಹಾಳದಲ್ಲಿ ಸಿಎಎ ಹಾಗೂ ಎನ್ಆರ್ಸಿ ವಿರೋಧಿಸಿ ಮುಸ್ಲಿಂ ಹಾಗೂ ದಲಿತಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿವೆ.
ಮುದ್ದೇಬಿಹಾಳದ ಕಿಲ್ಲಾದಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡಿದ್ದು ಪ್ರತಿಭಟನಾಕಾರರು ಪ್ರಧಾನಿ ಮೋದಿ ಹಾಗೂ ಆರ್ಎಸ್ಎಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತ ಸಾಗಿದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದೇಶ ಒಡೆಯುವ ಉದ್ದೇಶ ಹೊಂದಿದೆಯೇ? ರಕ್ತಪಾತದ ಇಚ್ಛೆ ನಿಮಗೆ ಇದೆಯೇ? ಶಾಂತಿಯುತ ರಾಷ್ಟ್ರದಲ್ಲಿ ಅಶಾಂತಿಯ ಬೀಜ ಬಿತ್ತುತ್ತಿದ್ದೀರಿ ಎಂದು ಮಾಜಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಅಲ್ಲದೆ, ಮತಬ್ಯಾಂಕ್ ಮಾಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವರು ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.