ಕಾನ್ಪುರ: 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಸಹಪಾಠಿಯನ್ನು ಚಾಕುವಿನಿಂದ ಇರಿದು ಕೊಂದಿರುವ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಕಾನ್ಪುರ ಬಳಿಯ ಗೋಪಾಲ್ಪುರಿ ಎಂಬಲ್ಲಿ ನಡೆದಿದೆ.
ಇದನ್ನೂ ಓದಿ: ಪ್ರೇಮ ವಿವಾಹಕ್ಕೆ ಪೋಷಕರ ಒಪ್ಪಿಗೆ ಕಡ್ಡಾಯ? ಪರಿಶೀಲನೆಗೆ ಮುಂದಾಗಿದೆ ಈ ರಾಜ್ಯ..
ಮೃತನನ್ನು ನೀಲೇಂದ್ರ ತಿವಾರಿ(15) ಎಂದು ಗುರುತಿಸಲಾಗಿದ್ದು, ಆರೋಪಿಗೆ 13 ವರ್ಷವಾಗಿದ್ದು ಆತನ ಹೆಸರನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ. ಖಾಸಗಿ ಶಾಲೆಯಲ್ಲಿ ಊಟದ ವಿರಾಮದ ವೇಳೆ ಈ ಘಟನೆ ನಡೆದಿದೆ. ಇಬ್ಬರೂ ಹುಡುಗರು ಮೊದಲು ಉತ್ತಮ ಸ್ನೇಹಿತರಾಗಿದ್ದರು ಆದರೆ ತಮ್ಮ ತರಗತಿಯ ಹುಡುಗಿಯೊಂದಿಗೆ ಮಾತನಾಡುವ ಸಲುವಾಗಿ ಜಗಳವಾಡಿದ್ದರು.
ಶಾಲಾ ಬ್ಯಾಗ್‌ನಲ್ಲಿ ಚಾಕು:
ಆರೋಪಿಯು ಸೋಮವಾರದಂದು ತನ್ನ ಶಾಲಾ ಬ್ಯಾಗ್‌ನಲ್ಲಿ ಚಾಕು ತಂದಿದ್ದು, ಊಟದ ಸಮಯದಲ್ಲಿ ನೀಲೇಂದ್ರ ಒಬ್ಬನೇ ಇದ್ದುದನ್ನು ಕಂಡು ಕುತ್ತಿಗೆ ಭಾಗದಲ್ಲಿ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಶಾಲಾ ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದು, ನೀಲೇಂದ್ರ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಆತನನ್ನು ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಇನ್ನು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.(ಏಜೆನ್ಸೀಸ್)