ನ್ಯೂಸ್

Puri ತಿಂದು ಬಾಲಕ ಸಾವು; ಅಧಿಕಾರಿಗಳು ನೀಡಿದ ಕಾರಣ ಹೀಗಿದೆ

ಹೈದರಾಬಾದ್​: ಏಕಕಾಲದಲ್ಲಿ ಮೂರಕ್ಕಿಂತ ಹೆಚ್ಚು ಪೂರಿಗಳನ್ನು (Puri) ತಿನ್ನಲು ಹೋಗಿ 11 ವರ್ಷದ ಬಾಲಕನೋರ್ವ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಹೈದರಾಬಾದ್​ನ ಬೇಗಂಪೇಟ್​ನಲ್ಲಿ ನಡೆದಿದೆ. ಮೃತ ಬಾಲಕನನ್ನು ವಿಕಾಸ್​ ಜೈನ್​​ (11) ಎಂದು ಗುರುತಿಸಲಾಗಿದ್ದು, ಈತನ ತಂದೆ ಗೌತಮ್​ ಜೈನ್​ ನೀಡಿದ ದೂರನ್ನು ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆ ಕುರಿತು ಮಾತನಾಡಿರುವ ಹಿರಿಯ ಅಧಿಕಾರಿಯೊಬ್ಬರು (Senior Police Officer), ಸಿಕಂದರಾಬಾದ್‌ನ ತಿವೋಲಿ ಥಿಯೇಟರ್ ಬಳಿ ಇರುವ ಶಾಲೆಯಲ್ಲಿ ವಿಕಾಸ್ ಜೈನ್ 6ನೇ ತರಗತಿಯಲ್ಲಿ ಓದುತ್ತಿದ್ದ. ಮನೆಯಿಂದ ತಂದ ಪೂರಿಯನ್ನು (Puri) ಮಧ್ಯಾಹ್ನ ಊಟದ ಸಮಯದಲ್ಲಿ ತಿನ್ನುವಾಗ ಈ ಘಟನೆ ಸಂಭವಿಸಿದೆ. ಊಟದ ವೇಳೆ ಮೂರು ಪೂರಿ (Puri) ಒಟ್ಟಿಗೆ ತಿಂದ ಪರಿಣಾಮ ಬಾಲಕನಿಗೆ ಉಸಿರುಗಟ್ಟಿ ನೆಲಕ್ಕೆ ಕುಸಿದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಶಾಲಾ ಆಡಳಿತ ಮಂಡಳಿ ಬಾಲಕನ ಪೋಷಕರಿಗೆ ಕರೆ ಮಾಡಿ ನಿಮ್ಮ ಮಗ ಊಟದ ಸಮಯದಲ್ಲಿ ಒಟ್ಟಿಗೆ ಮೂರು ಪೂರಿ ತಿಂದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ. ಸದ್ಯ ಪೊಲೀಸರು ಮೃತ ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು (Senior Police Officer) ತಿಳಿಸಿದ್ದಾರೆ.