ನ್ಯೂಸ್

ಸಿಡಿ ಕೇಸ್​ಗೆ ಸಿಲುಕಿದ್ದ ಜಾರಕಿಹೊಳಿ ಈಗ ನಿರಾಳ; ವಿಶೇಷ ತನಿಖಾ ದಳದಿಂದ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಕೆ

Webdesk - Ravikanth

ಬೆಂಗಳೂರು: ಮಾಜಿ ಸಚಿವರ ವಿರುದ್ಧ ಕೇಳಿ ಬಂದಿದ್ದ ಲೈಂಗಿಕ ಹಗರಣ ಸಂಬಂಧ ತನಿಖೆ ಪೂರ್ಣಗೊಳಿಸಿರುವ ವಿಶೇಷ ತನಿಖಾ ದಳ ಶುಕ್ರವಾರ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ.

ಗುರುವಾರ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೆ ಎಸ್‌ಐಟಿ ಎಸಿಪಿ ಕವಿತಾ ಅವರು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ. ಅಲ್ಲಿಗೆ ಮಾಜಿ ಸಚಿವರ ವಿರುದ್ಧ ಕೇಳಿ ಬಂದಿದ್ದ ಲೈಂಗಿಕ ಹಗರಣದಿಂದ ಮುಕ್ತರಾಗಿದ್ದಾರೆ. ಸಂತ್ರಸ್ತೆ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ. ಸೂಕ್ತ ಸಾಕ್ಷ್ಯಾಧಾರಗಳು ಇಲ್ಲವೆಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಮಾಜಿ ಸಚಿವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದರು. ಆರೋಪ ಕೇಳಿಬರುತ್ತಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಇದಾದ ಮೇಲೆ ತನ್ನ ವಿರುದ್ಧ ಸಿಡಿ ಬಿಡುಗಡೆ ಮಾಡಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವರು ಸಹ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.