ನ್ಯೂಸ್

ಸ್ವಚ್ಛತೆ, ನೈರ್ಮಲ್ಯಕ್ಕೆ ಎಲ್ಲರ ಸಹಕಾರ ಅಗತ್ಯ

ಡಿ.ಪಿ.ನಾಗರಾಜ ಶ್ರೇಷ್ಠಿ

ಚಿತ್ರದುರ್ಗ: ಪ್ರಸಕ್ತ ಸಾಲಿನಲ್ಲಿ ನರೇಗಾ ಜಾಬ್‌ಕಾರ್ಡ್ ಹೊಂದಿರುವ ಅರ್ಹರಿಗೆ ಉದ್ಯೋಗ ನೀಡ ಬೇಕೆಂದು ಜಿಪಂ ಸಿಇಒ ಎಸ್.ಜೆ.ಸೋಮ ಶೇಖರ್ ಹೇಳಿದರು.

ಚಿತ್ರದುರ್ಗ ತಾಲೂಕು ಮಾಡನಾಯಕನಹಳ್ಳಿ ಗ್ರಾಪಂ ಕಚೇರಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನರೇಗಾದಡಿ ವೈಯಕ್ತಿಕ ಕಾಮಗಾರಿಗಳಿಗೂ ಆದ್ಯತೆ ನೀಡಬೇಕೆಂದು ಸೂಚಿಸಿದರು.

ನರೇಗಾ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಗ್ರಾಮಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳಲು ಸಾರ್ವಜ ನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಗ್ರಾಪಂ ಜನಪ್ರತಿನಿಧಿಗಳು ಮತ್ತು ಗ್ರಾಮಸ್ಥರೊಂದಿಗೆ ಅಭಿವೃದ್ಧಿ ಬಗ್ಗೆ ಸಂವಾದ ನಡೆಸಿದರು.

ಕುಡಿಯುವ ನೀರಿನ ಸಮಸ್ಯೆಗಳ ಕುರಿತಂತೆ ಹಾಗೂ ಗ್ರಂಥಾಲಯ, ಅಂಗನವಾಡಿ ಕೇಂದ್ರ, ಕರವಸೂಲಾತಿ ಮತ್ತು 15ನೇ ಹಣಕಾಸು ಆಯೋಗ ಅನುದಾನದ ವಿವರ ಪಡೆದರು. ಇ-ಸ್ವತ್ತುಗಳನ್ನು ಸಕಾಲದಲ್ಲಿ ಸಾರ್ವಜನಿಕರಿಗೆ ವಿತರಿಸುವಂತೆ ಸೂಚಿಸಿದರು.

ತಾಪಂ ಇಒ ರವಿಕುಮಾರ್, ಸಹಾಯಕ ನಿರ್ದೇಶಕ(ನರೇಗಾ) ಯರ‌್ರಿಸ್ವಾಮಿ, ಮಾಡನಾಯಕನಹಳ್ಳಿ ಗ್ರಾಪಂ ಅಧ್ಯಕ್ಷ ಎಸ್.ಪಿ. ರಾಜೇಶ್, ಉಪಾಧ್ಯಕ್ಷೆ ಎಸ್. ಸರಸ್ವತಿ, ಪಿಡಿಒ ಲಲಿತಾ, ಸದಸ್ಯರು, ಇತರರು ಇದ್ದರು.