ನ್ಯೂಸ್

ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ

ಕಿರಣ್ ಗೌಡ.ಜಿ

ಗೋಣಿಕೊಪ್ಪಲು: ಸ್ವಚ್ಛ ಕೊಡಗು, ಸುಂದರ ಕೊಡಗು ಅಭಿಯಾನದ ಅಂಗವಾಗಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಕಾಲೇಜು ಮುಂಭಾಗದ ಮುಖ್ಯ ರಸ್ತೆಯ ಎರಡೂ ಬದಿಯಲ್ಲಿ ಬಿದ್ದಿದ್ದ ತ್ಯಾಜ್ಯಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು.

ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಕಾಲೇಜು ಆವರಣದೊಳಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು. ಈ ವೇಳೆ ಮಾತನಾಡಿದ ಪ್ರಾಂಶುಪಾಲ ಡಾ.ಎಂ.ಬಿ.ಕಾವೇರಿಯಪ್ಪ, ಪ್ರತಿಯೊಬ್ಬರೂ ತಮ್ಮ ತಮ್ಮ ಮನಸ್ಸನ್ನು ಸ್ವಚ್ಛವಾಗಿ ಇಟ್ಟುಕೊಂಡರೆ ಮಾತ್ರ ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದಿಡಲು ಸಾಧ್ಯ. ಕೆಲವು ಕೆಟ್ಟ ಮನಸ್ಥಿತಿಯ ಜನರಿಂದಾಗಿ ಇಂದು ಪರಿಸರ ಹಾಳಾಗುತ್ತಿದೆ. ಅಂತಹವರಿಗೆ ಜಾಗೃತಿ ಮೂಡಿಸುವ ಮೂಲಕ ಅವರ ಮನಸ್ಸನ್ನು ಬದಲಾಯಿಸಿ, ಪ್ರಕೃತಿದತ್ತವಾಗಿ ಸುಂದರವಾಗಿರುವ ನಮ್ಮ ಕೊಡಗನ್ನು ಮುಂದಿನ ಪೀಳಿಗೆಗೆ ಅಷ್ಟೇ ಸುಂದರವಾಗಿ ಉಳಿಸಿಕೊಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಎನ್‌ಎಸ್‌ಎಸ್ ಅಧಿಕಾರಿ ಎಂ.ಎ.ಕುಶಾಲಪ್ಪ, ಪೂಜಾ ಶರಣು, ಉಪನ್ಯಾಸಕರು ಇತರರು ಇದ್ದರು.