ಕಾಳೇನಹಳ್ಳಿ ಗ್ರಾಮದಲ್ಲಿ ಗ್ರಾಮ ಠಾಣಾ ಜಾಗ ಒತ್ತುವರಿ ತೆರವು ಮಾಡಿ ಗಡಿ ಗುರುತಿಸಿ ಕಲ್ಲು ನೆಡುತ್ತಿರುವುದು. 
ನ್ಯೂಸ್

ಗ್ರಾಮ ಠಾಣಾ ಜಾಗ ಒತ್ತುವರಿ ತೆರವು

ಚಿಕ್ಕಮಗಳೂರು: ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಗ್ರಾಮ ಠಾಣಾ ಜಾಗ ಒತ್ತುವರಿಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ತಾರಾನಾಥ್ ನೇತೃತ್ವದಲ್ಲಿ ಗುರುವಾರ ತೆರವುಗೊಳಿಸಲಾಯಿತು.

ತಾರಾನಾಥ್ ಮಾತನಾಡಿ, ತಾಲೂಕಿನ ಈಶ್ವರಹಳ್ಳಿ ಗ್ರಾಪಂ ವ್ಯಾಪ್ತಿಯ ಕಾಳೇನಹಳ್ಳಿ ಗ್ರಾಮದ ಸರ್ವೇ ನಂ.21ರ ಜಾಗವನ್ನು ಅಕ್ಕಪಕ್ಕದ ಜಮೀನು ಮಾಲೀಕರು 1.33 ಎಕರೆ ಭೂಮಿಯನ್ನು ಒತ್ತುವರಿ ಮಾಡಿದ್ದರು. ಈ ಬಗ್ಗೆ ಗ್ರಾಮಸ್ಥರಿಂದ ಬಂದ ದೂರಿನ ಮೇರೆಗೆ ಸರ್ವೇ ಮಾಡಿಸಿ ತೆರವುಗೊಳಿಸಲಾಗಿದೆ ಎಂದು ಹೇಳಿದರು.
ಜಾಗವನ್ನು ಸಾರ್ವಜನಿಕ ಉದ್ದೇಶಕ್ಕಾಗಿ ಬಳಕೆ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಸಭೆಯಲ್ಲಿ ತೀರ್ಮಾನ ಕೈಗೊಂಡು, ಅರ್ಹರಿಗೆ ನಿವೇಶನ ಹಂಚಿಕೆ ಉದ್ದೇಶ ಹಾಗೂ ಗ್ರಾಮಗಳ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಬಳಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈಶ್ವರಹಳ್ಳಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ಸೋಮೇಗೌಡ, ಉಪಾಧ್ಯಕ್ಷೆ ಮಂಜಮ್ಮ, ಸದಸ್ಯರಾದ ಶೋಭಾ ಯೋಗೀಶ್, ನಾಗರಾಜ್, ಮೋಹನ್‌ಕುಮಾರ್, ರಂಗನಾಥ್, ದಿನೇಶ್, ಹೇಮಾ, ಪಿಡಿಒ ನಿರ್ವಾಣಸ್ವಾಮಿ, ಪಂಚಾಯತ್‌ರಾಜ್ ಇಲಾಖೆ ಸಹಾಯಕ ನಿರ್ದೇಶಕ ಜಯಸಿಂಹ, ಭೂಮಾಪನಾ ಇಲಾಖೆ ಅಧಿಕಾರಿ ಚಂದ್ರಶೇಖರ್ ಇದ್ದರು.