ನ್ಯೂಸ್

ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ: ಕೇಂದ್ರ ನಾಯಕರ ಭೇಟಿ, ಅಭಿನಂದನೆ

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಮತ್ತು ಸಚಿವ ಪ್ರಲ್ಹಾದ ಜೋಶಿ ಅವರನ್ನು ಸಿಎಂ ಬೊಮ್ಮಾಯಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಕೇಂದ್ರ ಸಚಿವರನ್ನು ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಅಭಿವೃದ್ಧಿಯ ವಿಷಯಗಳ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ. ಸಚಿವರು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರಕಾರದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು ಎಂದು ಸಿಎಂ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.