ನ್ಯೂಸ್

ಸಿಎಂ ಯಡಿಯೂರಪ್ಪ ಆರೋಗ್ಯದಲ್ಲಿ ಏರುಪೇರು, ಮತ್ತೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಎಂ.ಎಸ್​. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿನ್ನೆ ಸಿಎಂ ಜ್ವರದಿಂದ ಬಳಲುತ್ತಿದ್ದರು. ರೊಟೀನ್ ಚೆಕಪ್‌ಗಾಗಿ ರಾಮಯ್ಯ ಆಸ್ಪತ್ರೆಗೆ ಹೋಗಿದ್ದರು. ಯಡಿಯೂರಪ್ಪ ಅವರ ಆರೋಗ್ಯ ತಪಾಸಣೆ ಮಾಡಿದ ವೈದ್ಯರು ಅಡ್ಮಿಟ್​ ಆಗುವಂತೆ ಹೇಳಿದರು. ಹಾಗಾಗಿ ಆಸ್ಪತ್ರೆಗೆ ಸಿಎಂ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನಾ ಅಂದರೆ ಇಂದು ಬೆಳಗ್ಗೆ ಆರೋಗ್ಯ ಸಚಿವರೊಂದಿಗೆ ಸಿಎಂ ಕರೊನಾ ಎಮರ್ಜೆನ್ಸಿ ಮೀಟಿಂಗ್​ ಮಾಡಿದ್ದರು. ರಾಜ್ಯದಲ್ಲಿ ಕರೊನಾ ನಿಯಂತ್ರಿಸಲು ತುರ್ತಾಗಿ ಕೈಗೊಳ್ಳಬೇಕಾದ ಕ್ರಮಗಳ ಜಾರಿ ಕುರಿತು ಚರ್ಚಿಸಿದರು.

ನಿನ್ನೆ ಬೆಳಗಾವಿ ಲೋಕಸಭಾ ಉಪ ಚುನಾವಣೆ ಹಿನ್ನೆಲೆ ರೋಡ್​ ಶೋ ಮತ್ತು ಬಹಿರಂಗ ಸಭೆಯಲ್ಲೂ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಪರವಾಗಿ ಮತಯಾಚಿಸಿದ್ದರು.