ನ್ಯೂಸ್

ಸಿಎಂ ಕಚೇರಿ-ನಿವಾಸದಲ್ಲಿ 7 ಮಂದಿಗೆ ಕರೊನಾ ಸೋಂಕು, ಹೋಂ ಕ್ವಾರಂಟೈನ್​ನಲ್ಲಿ ಯಡಿಯೂರಪ್ಪ

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾ, ಖಾಸಗಿ ನಿವಾಸ ಧವಳಗಿರಿಯಲ್ಲಿ ಒಟ್ಟು 7 ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಬಿ.ಎಸ್​. ಯಡಿಯೂರಪ್ಪ ಅವರು ಹೋಂ ಕ್ವಾರಂಟೈನ್​ಗೆ ಒಳಪಟ್ಟಿದ್ದಾರೆ.

ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಣಾವನ್ನು ಸ್ಯಾನಿಟೈಸ್​ ಮಾಡಲಾಗಿದೆ. ಇಂದಿನಿಂದ ಕೆಲ ದಿನಗಳ ಕಾಲ ಗೃಹ ಕಚೇರಿ ಬದಲು ತಮ್ಮ ನಿವಾಸದಿಂದಲೇ ಕರ್ತವ್ಯ ನಿರ್ವಹಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಅಲ್ಲಿಂದಲೇ ವೀಡಿಯೋ ಕಾನ್ಫರೆನ್ಸ್ ‌ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನೂ ನೀಡಲಿದ್ದಾರೆ. ಇದನ್ನೂ ಓದಿರಿ ಹೋಟೆಲ್​ ಬಾಗಿಲಲ್ಲೇ ಶವ ಕಂಡು ಬೆಚ್ಚಿಬಿದ್ದ ಸ್ಥಳೀಯರು!

'ಯಾರೂ ಆತಂಕ ಪಡುವ ಅಗತ್ಯವಿಲ್ಲ, ನಾನು ಆರೋಗ್ಯವಾಗಿ ಇದ್ದೇನೆ. ಎಲ್ಲರೂ ಕರೊನಾದಿಂದ ದೂರವಿರಲು ಮುನ್ನೆಚ್ಚರಿಕೆಯ ಕ್ರಮ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಜತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ. ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ' ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋರಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾ, ಧವಳಗಿರಿ ನಿವಾಸದಲ್ಲಿ ಒಟ್ಟು ಹತ್ತು ಮಂದಿಗೆ ಕೊರನಾ ಪಾಸಿಟಿವ್​ ಬಂದಿದೆ. ಇವರ ನಿಕಟ ಸಂಪರ್ಕಿಗಳ ಜತೆಗೆ ಸಿಎಂ ಮತ್ತು ರಾಜಕೀಯ ಮುಖಂಡರಲ್ಲೂ ಸೋಂಕಿನ ಭೀತಿ ಆವರಿಸಿದೆ. ಗನ್​ ಮ್ಯಾನ್, ಅಡುಗೆ ಸಿಬ್ಬಂದಿ, ಎಲೆಕ್ಟ್ರಿಕ್ ಆಪರೇಟರ್, ಸ್ವಚ್ಛತಾ ಸಿಬ್ಬಂದಿಯಲ್ಲೂ ಸೋಂಕು ದೃಢಪಟ್ಟಿದೆ.