ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಪಿಡುಗು ತಡೆದು, ಸಂಪೂರ್ಣಮಟ್ಟ ಹಾಕುವ ಉದ್ದೇಶದಿಂದ ಏಳು ಜನ ಸಚಿವರನ್ನು ಒಳಗೊಂಡ ಕಾರ್ಯಪಡೆಯನ್ನು ಸಿಎಂ ಸಿದ್ದರಾಮಯ್ಯ ರಚಿಸಿ ಬುಧವಾರ ಆದೇಶ ಹೊರಡಿಸಿದ್ದಾರೆ.
ಸಂಬಂಧಿಸಿದ ಅಧಿಕಾರಿಗಳೊಂದಿಗೆ ತಿಂಗಳಿಗೊಮ್ಮೆ ಸಭೆ ನಡೆಸಿ, ಮಾದಕ ವಸ್ತು ಹಾವಳಿ ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸುವಂತೆ ಕಾರ್ಯಪಡೆಗೆ ಸೂಚಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷರಾಗಿರುವ ಕಾರ್ಯಪಡೆಗೆ ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ ಪಾಟೀಲ್, ಮಧು ಬಂಗಾರಪ್ಪ ಮತ್ತು ಡಾ.ಎಂ.ಸಿ.ಸುಧಾಕರ್ ಸದಸ್ಯರಾಗಿದ್ದಾರೆ.