ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಇದೀಗ ಸಿದ್ದರಾಮಯ್ಯಗೆ ದೊಡ್ಡ ಶಾಕ್ ನೀಡಿದೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ: ಹೊಸದಾಗಿ ಸ್ವೀಕರಿಸಿದ ಪ್ರಸಾದದಲ್ಲಿ ತಂಬಾಕು ತುಂಡು ಪತ್ತೆ! ಭಕ್ತೆ ಅಳಲು
ಏನಿದು ಮುಡಾ ಅಕ್ರಮ ಪ್ರಕರಣ: ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮುಡಾ ಸೈಟ್‌ಗಳನ್ನು ಹಂಚಿಕೆ ಮಾಡಲಾಗಿದೆ ಅನ್ನೋ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ದಾಖಲೆಗಳ ಜೊತೆ ಆರೋಪಿಸಿರುವ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಅವರು, ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಬದಲಿ ನಿವೇಶನ ನೀಡಿ ಲಾಭ ಮಾಡಿಕೊಟ್ಟಿರುವುದು ನಿಜ. ಮೈಸೂರಿನ ಕೆಸರೆ ಸರ್ವೇ ನಂಬರ್ 464 ವ್ಯಾಪ್ತಿಯಲ್ಲಿ 3.16 ಗಂಟೆ ಜಾಮೀನು ಸ್ವಾಧೀನ ಮಾಡಿಕೊಂಡಿದ್ದಾರೆ. ಇದಕ್ಕೆ ಪರ್ಯಾಯವಾಗಿ ವಿಜಯನಗರದ ಬಡಾವಣೆಯಲ್ಲಿ 14 ನಿವೇಶನವನ್ನು ಸಿಎಂ ಪತ್ನಿಯ ಹೆಸರಿಗೆ ನೀಡಿದ್ದಾರೆ ಎಂದು ಆರೋಪಿಸಿದ್ದರು.
ಇದನ್ನೂ ಓದಿ: ಪೌರ ಕಾರ್ಮಿಕರ ಸೇವೆ ಅನನ್ಯ
ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ?: ಇದು ಲಾಭದ ಉದ್ದೇಶ ಅಲ್ಲವೇ. ಈ ಹಿಂದಿನ ಮುಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು, ಸಿಎಂ ಪತ್ನಿ ಆರ್ಥಿಕ ಲಾಭವನ್ನು ಮಾಡಿಕೊಟ್ಟಿದ್ದಾರೆ. ಹೀಗಾಗಿ ಮುಡಾದ 50:50 ಹಗರಣದಲ್ಲಿ ಅವರು ಸಿಎಂ ಪತ್ನಿಯು ಭಾಗಿಯಾಗಿದ್ದಾರೆ ಎಂದು ಗಂಗರಾಜು ಹೇಳಿದ್ದರು.
ಮುಡಾ ವಿರುದ್ಧದ ಆರೋಪವೇನು?: ಭೂಮಿ ವಶಪಡಿಸಿಕೊಂಡ ಜಾಗ ಬಿಟ್ಟು ಅಥವಾ ಸಮಾನಾಂತರವಾದ ಜಾಗ ಬಿಟ್ಟು ವಿಜಯನಗರದಲ್ಲಿ ಅಭಿವೃದ್ಧಿ ಆಗಿರುವ 38ಸಾವಿರದ 284 ಚದರಡಿ ಭೂಮಿ ಹಂಚಿಕೆ ಮಾಡಲಾಗಿದೆ. ಅಲ್ಲದೇ, 1998ರಲ್ಲಿ ಕಳೆದುಕೊಂಡ ಭೂಮಿಗೆ 2021ರಲ್ಲಿ ಪರಿಹಾರ ನೀಡಲಾಗಿದೆ ಎಂಬುದು ಆರ್‌ಟಿಐ ಕಾರ್ಯಕರ್ತರ ಆರೋಪವಾಗಿದೆ. ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ? ಇದು ಲಾಭದ ಉದ್ದೇಶ ಅಲ್ಲವೇ. ಈ ಹಿಂದಿನ ಮೂಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು, ಸಿಎಂ ಪತ್ನಿ ಆರ್ಥಿಕ ಲಾಭವನ್ನು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.