ನ್ಯೂಸ್

ಸರ್ಕಾರದ ಬಳಿ ದುಡ್ಡಿಲ್ಲ ಎಂದು ಗೃಹ ಸಚಿವ ಮೂಲಕ ಹೇಳಿಸಿದ CM: ಖಾಲಿ, ಖಾಲಿ, ಖಜಾನೆ ಖಾಲಿ!: BJP ವ್ಯಂಗ್ಯ

BJP: ಅವೈಜ್ಞಾನಿಕ ಗ್ಯಾರಂಟಿ ಯೋಜನೆ, ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ರಾಜ್ಯದ ಬೊಕ್ಕಸ ಬರಿದು ಮಾಡಿಕೊಂಡ ಸಿದ್ದರಾಮಯ್ಯ ಸರ್ಕಾರ, ಶಾಸಕರಿಗೆ ಅನುದಾನ ನೀಡಲು ನಮ್ಮ ಬಳಿ ದುಡ್ಡಿಲ್ಲ ಅಂತ ಗೃಹ ಸಚಿವರ ಮೂಲಕ ಹೇಳಿಸಿದೆ ಎಂದು ವ್ಯಂಗ್ಯವಾಡಿದೆ.

ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್​​ ರಾಜ್ಯವನ್ನು ದಿವಾಳಿ ಮಾಡಿದೆ. ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಬಗ್ಗೆ ಕಾಂಗ್ರೆಸ್ ಶಾಸಕ ಬಿ. ಆರ್. ಪಾಟೀಲ್ ಆರೋಪ ಮಾಡಿದ್ದರೆ, ಒಂದೆಡೆ ಅನುದಾನ ವಿಚಾರವಾಗಿ ಶಾಸಕ ರಾಜು ಕಾಗೆ ಅಸಮಾಧಾನಗೊಂಡು ರಾಜೀನಾಮೆಗೆ ಮುಂದಾಗಿದ್ದಾರೆ.

ಮತ್ತೊಂದೆಡೆ ಒಂದು ಚರಂಡಿ ನಿರ್ಮಿಸಲು ಅನುದಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಎನ್.‌ ವೈ. ಗೋಪಾಲಕೃಷ್ಣ ಹೇಳಿದ್ದರು. ಅದರ ಬೆನ್ನೆಲ್ಲೇ ಈಗ ಗೃಹ ಸಚಿವ ಪರಮೇಶ್ವರ್​​ ಕೂಡ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ ಎಂದು ಬಿಜೆಪಿ ತಮ್ಮ ಎಕ್ಸ್​​ ಖಾತೆಯಲ್ಲಿ ಹೇಳಿಕೊಂಡಿದೆ.

ಒಟ್ಟಿನಲ್ಲಿ ಅನುದಾನವನ್ನೂ ನೀಡದೆ ಅಭಿವೃದ್ಧಿಯನ್ನೂ ಮಾಡದೆ ರಾಜ್ಯವನ್ನು ಕತ್ತಲೆಕೂಪಕ್ಕೆ ಕಾಂಗ್ರೆಸ್ ದೂಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯಲ್ಲೂ ಭ್ರಷ್ಟಾಚಾರವಿದೆ. ಭ್ರಷ್ಟಾಚಾರ ನಡೆಸಲೆಂದು ಇಲಾಖೆಯಲ್ಲಿ ಕೌಂಟರ್‌ಗಳನ್ನು ತೆರೆಯಲಾಗಿದೆ. ಸಿದ್ದರಾಮಯ್ಯನವರಿಗೆ ರಾಜ್ಯದ ಕುರಿತು ಕಿಂಚಿತ್ತಾದರೂ ಕಾಳಜಿ ಇದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. | ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ. https://www.vijayavani.net/cm-siddaramaiah-bollywood-actor-aamir-khan-face-to-face https://www.vijayavani.net/good-news-iran-israel-ceasefire-oil-prices-plummet