ಬೆಂಗಳೂರು: ಈ ಹಿಂದೆ ನಮ್ಮ ಸರ್ಕಾರದ ಅಧಿಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ (CM Siddarmaiah) ಭರವಸೆ ನೀಡಿದ್ದಾರೆ.
ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡುವುದಾಗಿ ನಿಯೋಗಕ್ಕೆ ಸಿಎಂ ಭರವಸೆ ನೀಡಿದ್ದು, ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಿದ್ದೇವೆ. ಸರ್ಕಾರ ಈಗಾಗಲೇ ಘೋಷಿಸಿದಂತೆ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತಿದ್ದು, ಶೀಘ್ರವೇ ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಕಳೆದ ಐದು ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ಸಮುದಾಯ ವಂಚಿತವಾಗಿದ್ದು, ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ನಿಗಮಗಳಲ್ಲಿ ಅನುದಾನ ಹೆಚ್ಚಳ, ವಸತಿ ಶಾಲೆ, ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸುವಂತೆ ಹಲವು ಬೇಡಿಕೆಗಳನ್ನು ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗವು ಸಿಎಂ ಸಿದ್ದರಾಮಯ್ಯ ಅವರ ಮುಂದಿಟ್ಟಿತು. ಸದ್ಯ ಇದಕ್ಕೆ ಮುಖ್ಯಮಂತ್ರಿಗಳು ಭರವಸೆ ನೀಡಿದ್ದು, ಮುಂದಿನ ದಿನಗಳಲ್ಲಿ ಈ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದಾರೆ.